Sunday, November 3, 2024

ಅನ್ನಭಾಗ್ಯ ಯೋಜನೆಗೆ ಇಂದು ದಶಕದ ಸಂಭ್ರಮ

ಬೆಂಗಳೂರು : ಕಾಂಗ್ರೆಸ್​ ಸರ್ಕಾರದ ಮಹತ್ವದ ಅನ್ನಭಾಗ್ಯ ಯೋಜನೆಗೆ ಇಂದು ದಶಕದ ಸಂಭ್ರಮ. ಸಿಎಂ ಸಿದ್ದರಾಮಯ್ಯನವರ ಹಸಿವು ಮುಕ್ತ ಕರ್ನಾಟಕ ಮಾಡುವ ಕನಸಿನ ಕೂಸಾದ ಅನ್ನಭಾಗ್ಯ ಯೋಜನೆಯನ್ನು 2013ರ ಜುಲೈ 10ರಂದು ಜಾರಿಗೆ ತರಲಾಯಿತು. ಈ ಯೋಜನೆಯಲ್ಲಿ ಬಿಪಿಎಲ್​ ಕಾರ್ಡ್​ ದಾರರಿಗೆ 1 ರೂಪಾಯಿಗೆ 1 ಕೆ.ಜಿ. ಅಕ್ಕಿ ನೀಡಲಾಯಿತು.

ಇದನ್ನೂ ಓದಿ: ಶಾಲಾ ಮಕ್ಕಳ ಸಮವಸ್ತ್ರ : ಪೋಷಕರ ಜೆಬಿಗೆ ಬಿತ್ತು ಕತ್ತರಿ

ಅನ್ನಭಾಗ್ಯ ಯೋಜನೆ ಜಾರಿಯಾಗಿ ಇಂದಿಗೆ 10 ವರ್ಷ ಕಳೆದಿದೆ. ಇದೇ ಸಂಭ್ರಮದಂದೇ ಅನ್ನಭಾಗ್ಯ ಜತೆ ಹಣಭಾಗ್ಯ ಜಾರಿ ಮಾಡುವ ಮಹತ್ವದ ತೀರ್ಮಾನವನ್ನು ಕೈಗೊಂಡ ಸಿದ್ದರಾಮಯ್ಯ ಸರ್ಕಾರ ಇಂದು ಸಂಜೆ 5ಕ್ಕೆ ರಾಜ್ಯದ ಅನ್ನಭಾಗ್ಯ ಫಲಾನುಭವಿಗಳ ಖಾತೆಗೆ 5 ಕೆ.ಜಿ ಅಕ್ಕಿಯ ಜೊತೆಗೆ ಹಣ ಭಾಗ್ಯಕ್ಕೆ ಚಾಲನೆ ನೀಡಲಿದ್ದಾರೆ.

ದಶಮಾನೋತ್ಸವದ ದಿನ ಲೋಡಿಂಗ್ ಕಾರ್ಮಿಕರು ಮತ್ತು ಶ್ರಮಿಕರೊಂದಿಗೆ ಸಂವಾದ ಕಾರ್ಯಕ್ರಮವನ್ನು ಆಯೋಜನೆ ಮಾಡುವ ಮೂಲಕ ಸಿಎಂ, ಕಾರ್ಮಿಕರಿಗೆ ಧನ್ಯವಾದ ತಿಳಿಸಲಿದ್ದಾರೆ.

 

RELATED ARTICLES

Related Articles

TRENDING ARTICLES