Wednesday, January 22, 2025

ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಭೂಬಾಲನ್ ಅಧಿಕಾರ ಸ್ವೀಕಾರ

ವಿಜಯಪುರ : ವಿಜಯಪುರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಟಿ. ಭೂಬಾಲನ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.

ಟಿ. ಭೂಬಾನ್ ಅವರು ಬಾಗಲಕೋಟೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರು 2015ರ ಬ್ಯಾಚ್‍ನ  ಐಎಎಸ್ ಅಧಿಕಾರಿ. ಇದಕ್ಕೂ ಮುನ್ನ ತುಮಕೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದರು.

ವಿಜಯಪುರ  ನಿರ್ಗಮಿತ ಜಿಲ್ಲಾಧಿಕಾರಿಗಳಾದ ವಿಜಯಮಹಾಂತೇಶ ದಾನಮ್ಮನವರ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಬರಮಾಡಿಕೊಂಡು, ಹೂಗುಚ್ಛ ನೀಡಿ ಸ್ವಾಗತಿಸಿ, ಸೋಮವಾರ ಅಧಿಕಾರ ಹಸ್ತಾಂತರಿಸಿದರು.

ಇದನ್ನೂ ಓದಿ : ನಾವು ಜೈನ ಮಂದಿರಕ್ಕೆ ರಕ್ಷಣೆ ಕೊಡುತ್ತೇವೆ : ಡಾ.ಜಿ ಪರಮೇಶ್ವರ

ತುಮಕೂರು ಪಾಲಿಕೆ ಆಯುಕ್ತರಾಗಿ ಸೇವೆ

3 ವರ್ಷಗಳ ಕಾಲ ಬಾಗಲಕೋಟೆ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದ ಟಿ. ಭೂಬಾಲನ್ ಅವರು ವಿಜಯಪುರ ಜಿಲ್ಲಾಧಿಕಾರಿಗಳಾಗಿ ವರ್ಗಾವಣೆಯಾಗಿದೆ. ಈ ಹಿಂದೆ ಬೀದರ್ ಮತ್ತು ದಾವಣಗೆರೆಯಲ್ಲಿ ಪ್ರೊಬೆಷನರಿಯಾಗಿದ್ದರು.

ಹರಪನಹಳ್ಳಿ ಮತ್ತು ಉಡುಪಿಯಲ್ಲಿ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಬಳಿಕ ತುಮಕೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ, ಸ್ಮಾರ್ಟ ಸಿಟಿ ವ್ಯವಸ್ಥಾಪಕ ನಿರ್ದೇಶಕರಾಗಿ ಹಾಗೂ ಚುನಾವಣಾ ಸಂದರ್ಭದಲ್ಲಿ ಬೆಳಗಾವಿ ವಿಶೇಷ ಜಿಲ್ಲಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ.

RELATED ARTICLES

Related Articles

TRENDING ARTICLES