Wednesday, December 18, 2024

Zero Traffic: ಸಂಚಾರ ಸಮಯದಲ್ಲಿ ಜಿರೋ ಟ್ರಾಫಿಕ್ ನನಗೆ ಬೇಡ : ಸಚಿವ ಪ್ರಿಯಾಂಕ್​ ಖರ್ಗೆ

ಕಲಬುರಗಿ: ಸಚಿವರ ಹಾಗೂ ಬೆಂಗಾವಲು ಪಡೆಯ ಸಂಚಾರಕ್ಕಾಗಿ ಯಾವುದೇ ರೀತಿಯಲ್ಲೂ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿ ಅಥವಾ ನಿರ್ಬಂಧ ಮಾಡದಂತೆ ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿ ಪೊಲೀಸರಿಗೆ ಖಡಕ್​ ಸೂಚನೆ ನೀಡಿದ್ದಾರೆ.

ಕಲಬುರಗಿಯಲ್ಲಿ ಇಂದು ಪೊಲೀಸ್​ ಕಮಿಷನರ್​ ಹಾಗೂ ಡಿಸಿಪಿ ಜೊತೆ ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಕುರಿತಂತೆ ಮಾಹಿತಿ ಪಡೆದುಕೊಂಡು ಮಾತನಾಡಿದ್ದ ಸಚಿವರು, ನಾವು ಸಂಚಾರಿಸುವ ಮಾರ್ಗದಲ್ಲಿ ಯಾವುದೇ ರೀತಿಯಿಂದ ಸಾರ್ವಜನಿಕರಿಗೆ ತೊಂದರೆಯಾಗಬಾರದು ಅದಕ್ಕೆ ನನಗೆ ಜಿರೋ ಟ್ರಾಫಿಕ್​ ಬೇಡ ಎಂದು ಸೂಚಿಸಿದರು.

ಇದನ್ನೂ ಓದಿ: ಅನ್ನಭಾಗ್ಯ ಯೋಜನೆಗೆ ಇಂದು ದಶಕದ ಸಂಭ್ರಮ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ-ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಚಿವರಾದ ಶರಣಪ್ರಕಾಶ್ ಪಾಟೀಲ್ ಜೊತೆ ಕಲಬುರಗಿಯ ಎಸ್‌ಪಿ, ಕಮೀಷನರ್ ಹಾಗೂ ಡಿಸಿಪಿ ಜೊತೆ ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಕುರಿತು ಚರ್ಚಿಸಿದರು.

RELATED ARTICLES

Related Articles

TRENDING ARTICLES