ಬೆಂಗಳೂರು : ನಿರ್ಮಾಪಕ ಎಂ.ಎನ್ ಕುಮಾರ್ ಅವರ ಆರೋಪ ಹಿನ್ನಲೆ ನಟ ಸುದೀಪ್ ಮೌನ ಮುರಿದಿದ್ಧಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ ಮತ್ತು ಕಲಾವಿದರ ಸಂಘಗಳಿಗೆ ಕಿಚ್ಚ ಸುದೀಪ್ ಅವರು ಸುಧೀರ್ಘ ಪತ್ರ ಬರೆದು ವಿವರಣೆ ಸಲ್ಲಿಸಿದ್ದಾರೆ.
ನಾನೇನಾದರೂ ತಪ್ಪು ಮಾಡಿದ್ದರೆ ನ್ಯಾಯಾಲಯದಲ್ಲಿ ಶಿರಬಾಗಿ ಒಪ್ಪಿಕೊಂಡು ದಂಡ ಕಟ್ಟುತ್ತೇನೆ. ನಾನು ಸರಿ ಇದ್ದೇನೆ. ನ್ಯಾಯ ಮತ್ತು ಸತ್ಯ ನನ್ನೊಂದಿಗೆ ಇದೆ ಎಂದು ಸುದೀಪ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇತ್ತೀಚಿಗೆ ನಡೆಯುತ್ತಿರುವ ವಿದ್ಯಮಾನಗಳ ಕುರಿತು ಐದು ಪುಟಗಳ ಪತ್ರ ಬರೆದಿರುವ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ತಮ್ಮ ನಿಲುವು ಏನು ಎಂಬುದನ್ನು ವಿವರಿಸಿದ್ದಾರೆ.
ಒಂದೇ ಒಂದು ಕಪ್ಪು ಚುಕ್ಕೆ ಬೀಳುವಂತೆ ನಡೆದುಕೊಂಡಿಲ್ಲ
ಸ್ನೇಹ, ಅನುಕಂಪ, ಪ್ರೀತಿಗೆ ತಲೆಬಾಗಿದ್ದೇನೆ
ಇದನ್ನೂ ಓದಿ : ‘ವೀರ ಸಿಂಧೂರ ಲಕ್ಷ್ಮಣ’ ಕನ್ಫರ್ಮ್ : ದರ್ಶನ್-ಉಮಾಪತಿ ಕಾಂಬೋನಲ್ಲಿ 2024ಕ್ಕೆ ಶೂಟಿಂಗ್ ಶುರು?
ನನ್ನ ಕೈಲಾದಷ್ಟೂ ಸಹಾಯ ಮಾಡಿದ್ದೇನೆ
ಸತ್ಯ ಸಾಬೀತು ಪಡಿಸಲು ನನಗೊಂದಿಷ್ಟು ಅವಕಾಶ ಕೊಡಿ
ಈ ಮೇಲ್ಕಂಡ ಕಾರಣಕ್ಕೆ ನಾನು ಎರಡು ವಿನಂತಿಗಳನ್ನು ತಮ್ಮಲ್ಲಿ ಮಾಡಿಕೊಳ್ಳುತ್ತೇನೆ. ಯಾರೇ ನಿಮ್ಮಲ್ಲಿ ದೂರಿಟ್ಟರೂ, ಯಾವುದೇ ಕಲಾವಿದರಿರಬಹುದು, ತಂತ್ರಜ್ಞರಿರಬಹುದು, ಯಾವುದೇ ವಿಭಾಗದವರಾಗಿರಬಹುದು, ಆ ದೂರಿನ ಕುರಿತಾದ ಸಾಕ್ಷಾಧಾರಗಳನ್ನು ಪರಿಶೀಲಿಸಿ ಮುಂದುವರಿಯಿರಿ ಮತ್ತು ಈ ಕೆಟ್ಟ ಪರಂಪರೆಗೆ ನಾಂದಿ ಹೇಳುವುದಕ್ಕೆ ನಾವು ಯಾರು ಹೊಣೆಗಾರರಾಗುವುದು ಬೇಡ. ದಯಮಾಡಿ ತಾವು ಸಂದಿಗ್ಧತೆಗೆ ಒಳಗಾಗದೆ, ನನ್ನ ಮೇಲೂ ಬಲವಂತದ ಒತ್ತಡ ಹಾಕದೆ, ನ್ಯಾಯಾಲಯದಲ್ಲೇ ಇದನ್ನು ಬಗೆಹರಿಸಿಕೊಳ್ಳಲು ಬಿಡಿ. ನಾನೇನಾದರೂ ತಪ್ಪು ಮಾಡಿದರೆ ನ್ಯಾಯಾಲಯದಲ್ಲೇ ಶಿರಬಾಗಿ ಒಪ್ಪಿಕೊಂಡು ದಂಡ ಕಟ್ಟುತ್ತೇನೆ. ನಾನು ಸರಿ ಇದ್ದೇನೆ. ನ್ಯಾಯ ಮತ್ತು ಸತ್ಯ ನನ್ನೊಂದಿಗಿದೆ ಎಂದು ಸಾಬೀತು ಮಾಡಿಕೊಳ್ಳಲು ನಂಗೊಂದಿಷ್ಟು ಅವಕಾಶ ಕೊಡಿ ಎಂದು ಪ್ರೀತಿಯಿಂದ ಕೇಳಿಕೊಳ್ಳುತ್ತಾ
ಎಂದೆಂದಿಗೂ ನಿಮ್ಮವ ಕಿಚ್ಚ ಸುದೀಪ.