Wednesday, January 22, 2025

ಮಾನಸಿಕ ಖಿನ್ನತೆಯಿಂದ ಮನನೊಂದು ನದಿಗೆ ಹಾರಿ ಸ್ವಾಮೀಜಿ ಆತ್ಮಹತ್ಯೆ

ಮೈಸೂರು: ಜೈನಮುನಿ ಆತ್ಮಹತ್ಯೆ ಬೆನ್ನಲ್ಲೇ ಮತ್ತೊಂದು ದುಘ೯ಟನೆ ಸಂಭವಿಸಿಸದೆ.

ಹೌದು, ನದಿಗೆ ಹಾರಿ ಸ್ವಾಮೀಜಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ.

ಇದನ್ನೂ ಓದಿ: ಕೊಡಲಿಯಿಂದ ಕೊಚ್ಚಿ ಪತ್ನಿಯನ್ನೇ ಕೊಂದ ಪತಿರಾಯ

ಕಳೆದೆರೆಡು ದಿನಗಳಿಂದ ನಾಪತ್ತೆಯಾಗಿದ್ದ ಸ್ವಾಮೀಜಿ ಮೃತರನ್ನು ಶಿವಪ್ಪ ದೇವರು(60) ಎಂದು ಗುರುತಿಸಲಾಗಿದ್ದು, ಕಳೆದ 45 ವರ್ಷಗಳಿಂದ ಮಠದಲ್ಲಿ ಶಿವಪ್ಪ ಸ್ವಾಮೀಜಿ ಸೇವೆ ಸಲ್ಲಿಸಿದ್ದರು. ಟಿ.ನರಸೀಪುರ ತಾಲ್ಲೂಕಿನ ಮುಡುಕುತೊರೆ ಬಳಿ ಇರುವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು ನಂಜನಗೂಡಿನ ದೇವನೂರು ಮಠದ ಸ್ವಾಮೀಜಿ ಶಿಷ್ಯರಾಗಿದ್ದ ಇವರು ಕಳೆದ ಕೆಲ ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಮಠಕ್ಕೆ ಬರುವ ಭಕ್ತಾದಿಗಳ ಜೊತೆ ಉತ್ತಮ ಒಡನಾಟವನ್ನು ಹೊಂದಿದ್ದರು. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಕಲಿವೂರು ಗ್ರಾಮದವರಾಗಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ತಲಕಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES

Related Articles

TRENDING ARTICLES