Monday, May 20, 2024

ಇನ್ನೂ 4 ದಿನ ಕರಾವಳಿಯಲ್ಲಿ ಭಾರೀ ಮಳೆ : ಯಾವೆಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​?

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಕೆಲವೆಡೆ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Rains : ಕರಾವಳಿ ಭಾಗಗಳಲ್ಲಿ ಮುಂಗಾರು ಚುರುಕು

ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯನಗರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

 ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ 

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

 

 

RELATED ARTICLES

Related Articles

TRENDING ARTICLES