ಬೆಂಗಳೂರು: ರಸ್ತೆ ಬದಿ ಅನಧಿಕೃತವಾಗಿ ಕಸ ಸುರಿಯುವುದನ್ನು ತಡೆಗಟ್ಟಲು ಬಿಬಿಎಂಪಿ ಹೆಚ್ಚಿನ ಕ್ರಮ ಕೈಗೊಳ್ಳಲಿದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿಕೆ ನೀಡಿದ್ದಾರೆ.
ಹೌದು, ನಗರದ ರಸ್ತೆ ಬದಿಯಲ್ಲಿ ಅನಧಿಕೃತವಾಗಿ ಕಸ ಸುರಿಯುವುದು ತಡೆಗಟ್ಟಲು, ರಸ್ತೆ ಗುಂಡಿ, ಬೀದಿ ದೀಪಗಳ ಬಗ್ಗೆ ನಿಗಾ ವಹಿಸುವುದಕ್ಕೆ ಪ್ರತ್ಯೇಕ ಸ್ಕ್ವಾಡ್ ರಚಿಸಲಾಗುವುದು.
ಜೊತೆಗೆ ಪ್ರಾಯೋಗಿಕವಾಗಿ ಒಂದು ವಲಯದಲ್ಲಿ ಅನುಷ್ಠಾನ ಮಾಡ್ತೀವಿ, ನಂತರ ಇನ್ನು ಬೇರೆ ವಲಯಗಳಲ್ಲೂ ಜಾರಿ ಮಾಡುತ್ತೇವೆ ಎಂದರು.
ಇನ್ನೂ ತ್ಯಾಜ್ಯ ಘಟಕಕ್ಕೆ ಕಸ ವಿಲೇವಾರಿ ಮಾಡುವ ಲಾರಿಗಳ ಬಗ್ಗೆ ನಿಗಾ, ಬೇರೆಡೆ ಕಸ ಸುರಿದು ಹೋಗುವ ಲಾರಿಗಳ ಬಗ್ಗೆ ಹೆಚ್ಚಿನ ಎಚ್ಚರ ವಹಿಸ್ತೀವಿ ಎಂದರು.
ಇದನ್ನೂ ಓದಿ: ಕೈ’ನಾಯಕ ರಾಹುಲ್ ಗಾಂಧಿ ಅರ್ಜಿ ತಿರಸ್ಕೃತ : ನಾಳೆ ಮೌನ ಪ್ರತಿಭಟನೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದಚಾರಿ ರಸ್ತೆಗಳಲ್ಲಿ ಮತ್ತು ರಸ್ತೆಗಳಲ್ಲಿ ಅನಧಿಕೃತವಾಗಿ ಕಸ ಸುರಿಯುವುದು, ಬ್ಲಾಕ್ ಸ್ಪಾಟ್, ರಸ್ತೆ ಗುಂಡಿ ಹಾಗೂ ಬೀದಿ ದೀಪಗಳ ಬಗ್ಗೆ ನಿಗಾ ವಹಿಸುವುದಕ್ಕೆ ಮಾರ್ಷಲ್ ಹಾಗೂ ಬಿಬಿಎಂಪಿ ವಿವಿಧ ವಿಭಾಗದ ಅಧಿಕಾರಿಗಳನ್ನು ಒಳಗೊಂಡಂತೆ ಸ್ಕ್ವಾಡ್ ತಂಡ ರಚನೆ ಮಾಡಲಾಗಿದೆ ಎಂದರು.