Sunday, December 22, 2024

‘ಕೈ’ನಾಯಕ ರಾಹುಲ್ ಗಾಂಧಿ ಅರ್ಜಿ ತಿರಸ್ಕೃತ : ನಾಳೆ ಮೌನ ಪ್ರತಿಭಟನೆ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಸಂಸತ್‌ ಸದಸ್ಯತ್ವ ಅನರ್ಹಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡ ಹಿನ್ನೆಲೆ ನಾಳೆ ಬೆಂಗಳೂರು ಸೇರಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ಸಿದ್ದತೆ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ತಾತನಾದ ಸಂಭ್ರಮದಲ್ಲಿ ಬಸವರಾಜ ಬೊಮ್ಮಾಯಿ

ಬಿಜೆಪಿ ಪಕ್ಷದ ದ್ವೇಷ ರಾಜಕಾರಣ ವಿರೋಧಿಸಿ ನಾಳೆ ಬಾಯಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಕೈ ನಾಯಕರ  ಮೌನ ಹೋರಾಟದಲ್ಲಿ ಭಾಗಿಯಾಗುವಂತೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​ ಕರೆ ಕೊಟ್ಟಿದ್ದಾರೆ.

ನಗರದ ಫ್ರೀಡಂ ಪಾರ್ಕ್‌ನಲ್ಲಿ ನಾಳೆ ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಸಿಎಂ ಸಿದ್ದರಾಮಯ್ಯ ಮತ್ತು  ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಮೌನ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಯಲ್ಲಿ ರಾಜ್ಯದ ಸಚಿವರು ಸೇರಿದಂತೆ ಹಲವು ಶಾಸಕರು ಮತ್ತು ಮುಖಂಡರು ಭಾಗಿಯಾಗಲಿದ್ದಾರೆ.

 

RELATED ARTICLES

Related Articles

TRENDING ARTICLES