ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಕಡಿಮೆಯಾಗಿರುವ ಹಿನ್ನೆಲೆ ನೋಂದಣಿ ಶಿಭಿರಗಳನ್ನ ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ಬೆಸ್ಕಾಂ ಎಂ.ಡಿ. ಮಹಂತೇಶ್ ಬೀಳಗಿ ತಿಳಿಸಿದ್ದಾರೆ.
ಇದನ್ನೂ ಓದಿ:ರಸ್ತೆ ಬದಿ ಕಸ ಸುರಿಯುವವರ ಮೇಲೆ ಬಿಬಿಎಂಪಿ ಸ್ಕ್ವಾಡ್ ನಿಗಾ..!
ನಗರದ ಕಛೇರಿಯಲ್ಲಿ ಮಾತನಾಡಿದ ಅವರು, ಗೃಹಜ್ಯೋತಿ ನೋಂದಣಿ ಪ್ರಕ್ರಿಯೆ ಸರಾಗವಾಗಿ ನಡೆಯುತ್ತಿದ್ದು ಬೆಸ್ಕಾಂ ವ್ಯಾಪ್ತಿಯಲ್ಲಿಯೇ ಸುಮಾರು 40ಲಕ್ಷ ಜನ ಗೃಹಜ್ಯೋತಿಗೆ ನೋಂದಣಿ ಮಾಡಿಸಿಕೊಂಡಿದ್ದಾರೆ. ಇನ್ನೂ ಎಲ್ಲಾ ‘ಎಸ್ಕಾಂ’ ಗಳಿಂದ 1ಕೋಟಿ 3ಲಕ್ಷಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದಾರೆ.
ಗ್ರಾಮೀಣ ಭಾಗದಲ್ಲಿ ಜನತೆಗೆ ಮಾಹಿತಿ ಕೊರತೆ ಹಾಗೂ ಅನಕ್ಷರಸ್ಥರು ಹೆಚ್ಚಾಗಿರುವ ಕಾರಣ ಗೃಹಜ್ಯೋತಿ ಯೋಜನಗೆ ನೋಂದಣಿ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಅನುಕೂಲವಾಗುವಂತೆ ಗೃಹಜ್ಯೋತಿಗೆ ಅರ್ಜಿ ಸಲ್ಲಿಸಲು ನೋಂದಣಿ ಶಿಬಿರವನ್ನು ತೆರೆಯಲು ಚಿಂತನೆ ನಡೆದಿದೆ ಎಂದರು.
ಈ ಕುರಿತು ಮುಂದಿನ ದಿನಗಳಲ್ಲಿ ಸಚಿವರ ಗಮನಕ್ಕೆ ತಂದು ಗ್ರಾಮಿಣ ಭಾಗದಲ್ಲಿ ನೋಂದಣಿ ಶಿಬಿರಗಳನ್ನು ಮಾಡಲು ಚಿಂತನೆ ನಡೆಸಲಾಗುತ್ತದೆ ಎಂದು ಅವರು ಹೇಳಿದರು.