ಬೆಂಗಳೂರು : ಅನ್ನಭಾಗ್ಯ ಯೋಜನೆ ರುವಾರಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸದನದಲ್ಲಿ ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಬ್ಯಾಟಿಂಗ್ ಮಾಡಿದರು.
ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ವೇಳೆ ಅನ್ನಭಾಗ್ಯ ಯೋಜನೆ ಪರವಾಗಿ ಅವರು ಮಾತನಾಡಿದರು.
ಅನ್ನಭಾಗ್ಯ ಯೋಜನೆಯ ಹಿಂದೆ ಸಿದ್ದರಾಮಯ್ಯ ಅವರ ಅನುಭವ ಇದೆ. ಬಡತನದ ಹಿನ್ನೆಲೆಯ ಸಿದ್ದರಾಮಯ್ಯ ಕುಟುಂಬದ ಬಗ್ಗೆ ನನಗೆ ಗೊತ್ತಿದೆ. ಆ ಕಾರಣಕ್ಕೆ ಸಿದ್ದರಾಮಯ್ಯ ಅನ್ನಭಾಗ್ಯ ತಂದಿದ್ದಾರೆ. ಅದಕ್ಕಾಗಿ ನಾನು ಸಿದ್ದರಾಮಯ್ಯ ಅವರನ್ನು ಅಭಿನಂದಿಸುತ್ತೇನೆ ಎಂದರು.
ಇದನ್ನೂ ಓದಿ : ಅನ್ನಭಾಗ್ಯ ಯೋಜನೆ: ಬ್ಯಾಂಕ್ ಖಾತೆಗೆ ಹಣ ಜಮೆಯಾಗಿದೆಯಾ? ಹೀಗೆ ತಿಳಿಯಿರಿ
ಕೇಂದ್ರ ಅಕ್ಕಿಯನ್ನು ನೀಡಬೇಕು
ಸಿದ್ದರಾಮಯ್ಯ ಅವರ ಕುಟುಂಬ, ಹೋಲ, ಗದ್ದೆ ನನಗೆ ಗೊತ್ತು. ಅವರ ತುಂಬು ಕುಟುಂಬದ ಬಗ್ಗೆಯೂ ನನಗೆ ಗೊತ್ತು. ಆದರೆ, ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಸಹಕಾರ ನೀಡದಿರುವುದು ಸರಿಯಲ್ಲ. ಕೇಂದ್ರ ಸರ್ಕಾರ ಅಕ್ಕಿಯನ್ನು ನೀಡಬೇಕು ಎಂದು ಒತ್ತಾಯಿಸಿದರು.
ನಮ್ಮ ರಾಜ್ಯದ ತೆರಿಗೆ ಕೇಂದ್ರ ಸರ್ಕಾರಕ್ಕೆ ಹೋಗುವುದು. ಅನ್ನಭಾಗ್ಯಕ್ಕೆ ಅಕ್ಕಿ ಕೊಡಲ್ಲ ಅನ್ನೋದು ಸರಿಯಲ್ಲ. ಗಾಂಧೀಜಿ ಸಹ ಅನ್ನದ ಮಹತ್ವದ ಬಗ್ಗೆ ಹೇಳಿದ್ದಾರೆ. ಹಾಗಾಗಿ, ಅನ್ನಭಾಗ್ಯ ಯೋಜನೆ ಸರಿಯಾಗಿ ಜಾರಿಯಾಗಬೇಕು ಎಂದು ಹೇಳಿದರು.