Wednesday, January 22, 2025

ಕಾಂಗ್ರೆಸ್ ಬಂದ್ಮೇಲೆ ಜಿಹಾದಿ ಮನಃಸ್ಥಿತಿ ಇರೋರು ಎದ್ದು ಕೂತಿದ್ದಾರೆ : ಶ್ರೀರಾಮುಲು ಗುಡುಗು

ಮೈಸೂರು : ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲ ರಾಜ್ಯದೊಳಗಿನ ಜಿಹಾದಿ ಮನಃಸ್ಥಿತಿ ಇರುವ ಜನ ಎದ್ದು ಕೂರುತ್ತಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಗುಡುಗಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಕಾರ್ಯಕರ್ತರ ಹತ್ಯೆ ಶುರುವಾಗುತ್ತದೆ ಎಂದು ಛೇಡಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಕಾನೂನನ್ನು ಗಂಟು ಮೂಟೆ ಕಟ್ಟಿ ಬಿಸಾಡಲಾಗಿದೆ. ರಾಜ್ಯದೆಲ್ಲಡೆ ಕೊಲೆ, ಹತ್ಯೆ, ದೌರ್ಜನ್ಯ ಹೆಚ್ಚಾಗುತ್ತಿದೆ. ಮುಖ್ಯಮಂತ್ರಿಗಳ ಸ್ವಕ್ಷೇತ್ರದಲ್ಲೇ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅಂದ್ಮೇಲೆ ರಾಜ್ಯದ ಬೇರೆ ಭಾಗಗಳ ಪರಿಸ್ಥಿತಿ ಹೇಗಿರಬೇಡ ಸ್ವಲ್ಪ ಯೋಚಿಸಿ ಎಂದು ಕುಟುಕಿದರು.

ಇದನ್ನು ಓದಿ : ರಾಹುಲ್​ ಗಾಂಧಿ ಅನರ್ಹ : ಫ್ರೀಡಂ ಪಾರ್ಕ್​​ನಲ್ಲಿ ಕಾಂಗ್ರೆಸ್​ ನಾಯಕರ ಪ್ರತಿಭಟನೆ

ಸಂಚು ಮಾಡಿ ಹಿಂದೂಗಳ ಹತ್ಯೆ

ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ, ಸ್ವಾಮೀಜಿಗಳಿಗೆ, ಹಿರಿಯ ನಾಗರಿಕರಿಗೆ ರಕ್ಷಣೆಯೇ ಇಲ್ಲ. ಹೀಗಾಗಿ, ಕೊಲೆಗಳು ನಡೆಯುತ್ತವೆ. ವೇಣುಗೋಪಾಲ ನಾಯಕ ಹತ್ಯೆ ಪೂರ್ವ ನಿಯೋಜಿತ ಕೊಲೆಯಾಗಿದೆ. ಜಿಹಾದಿ ಮನಃಸ್ಥಿತಿ ಜನರು ಸಂಚು ಮಾಡಿಕೊಂಡು ಹಿಂದೂಗಳನ್ನು ಹತ್ಯೆ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಸಿದ್ದರಾಮಯ್ಯ ಕಣ್ಮುಂಚಿ ಕುಳಿತಿದ್ದಾರೆ

ಕಾಂಗ್ರೆಸ್ ನವರಿಗೆ ಅಧಿಕಾರದ ಅಹಂ ಜಾಸ್ತಿಯಾಗಿದೆ. ಕಾಂಗ್ರೆಸ್ ಸರ್ಕಾರಕ್ಕೆ ಈ ಕೊಲೆಗಳ ವಿಚಾರದಲ್ಲಿ ಗಂಭೀರತೆ ಇಲ್ಲ. ಹಿಂದೂ ಕಾರ್ಯಕರ್ತರು ಮೇಲೆ ಈ ರೀತಿ ದೌರ್ಜನ್ಯ ಮೇಲಿಂದ ಮೇಲೆ ನಡೆಯುತ್ತವೆ. ವೇಣುಗೋಪಾಲ ನಾಯಕ ಹತ್ಯೆ ನಂತರ ಜಿಲ್ಲಾ ಮಂತ್ರಿ ಅವರ ಕುಟುಂಬಕ್ಕೆ ಸ್ಪಂದಿಸುವ ಕೆಲಸವನ್ನು ಮಾಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಲ್ಲರು ಕಣ್ಮುಂಚಿ ಕುಳಿತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

RELATED ARTICLES

Related Articles

TRENDING ARTICLES