ಬೆಂಗಳೂರು : ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸುವ ಮೂಲಕ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬಾಯಿಗೆ ಕಪ್ಪು ಪಟ್ಟಿ ಕಟ್ಟಿ ಮೌನ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ:ಜೋಡಿ ಕೊಲೆಗೆ ಬಿಗ್ ಟ್ವಿಸ್ಟ್! : ಸತ್ಯ ಬಾಯ್ಬಿಟ್ಟ ಹಂತಕ ಫಿಲಿಕ್ಸ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸತ್ಯದ ಮಾತುಗಳನ್ನು ಸಹಿಸಿಕೊಳ್ಳದ ಪ್ರಧಾನಿ ಮೋದಿ ಈ ರೀತಿ ಸೇಡಿನ ಕ್ರಮ ಕೈಗೊಂಡಿದ್ದಾರೆಂದು ಬೆಂಗಳೂರು ದಕ್ಷಿಣ, ಕೇಂದ್ರ ಮತ್ತು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ವತಿಯಿಂದ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಸ್ವಾತಂತ್ರ್ಯ ಉದ್ಯಾನವನ ದಲ್ಲಿ ಮೌನ ಪ್ರತಿಭಟನೆಯನ್ನು ಕಾಂಗ್ರೆಸ್ ಮುಖಂಡರು ನಡೆಸಲಿದ್ದಾರೆ.
ಈ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮಂತ್ರಿಗಳಾದ ಕೆ ಎಚ್ ಮುನಿಯಪ್ಪ, ರಾಮಲಿಂಗಾರೆಡ್ಡಿ, ಬೋಸರಾಜ್, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು, ಪಕ್ಷದ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಮತ್ತಿತರರು ಭಾಗವಹಿಸಿ ರಾಹುಲ್ ಗಾಂಧಿಯವರಿಗೆ ಬೆಂಬಲ ವ್ಯಕ್ತಪಡಿಸಿದರು.