Wednesday, January 22, 2025

ರಾಹುಲ್​ ಗಾಂಧಿ ಅನರ್ಹ : ಶಿವಮೊಗ್ಗದಲ್ಲಿ ಕಾಂಗ್ರೆಸ್​ ನಾಯಕರ ಪ್ರತಿಭಟನೆ

ಶಿವಮೊಗ್ಗ : ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪ ಮಾಡಿದ್ದಾರೆ.

ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹಗೊಳಿಸಿರುವುದನ್ನು ಖಂಡಿಸಿ ನಗರದ ಗಾಂಧಿ ಪಾರ್ಕ್ ನ ಗಾಂಧಿ ಪ್ರತಿಮೆ ಮುಂಭಾಗ ಮೌನ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿದ್ದಾರೆ.

ರಾಹುಲ್ ಗಾಂಧಿಯವರ ಧ್ವನಿ ಹತ್ತಿಕ್ಕಲು ಸಂವಿಧಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ರಾಹುಲ್ ಗಾಂಧಿ ಅವರ ನಾಯಕತ್ವವನ್ನು ಅದುಮಿ ಹಾಕಲು ಬಿಜೆಪಿ ಸಕಲ ಪ್ರಯತ್ನದ ಒಳಸಂಚು ಮಾಡುತ್ತಿದೆ ಎಂದು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಜೈನಮುನಿ ಭೀಕರ ಹತ್ಯೆಗೆ ಖಂಡನೆ: ಜೈನ ಸಮುದಾಯ ಮೌನ ಪ್ರತಿಭಟನೆ

ಸೇಡಿನ ಕ್ರಮಗಳನ್ನು ಅನುಸರಿಸುತ್ತಿದೆ

ಬಿಜೆಪಿ, ಪ್ರಧಾನಿ ಮೋದಿ ಅವರು ರಾಹುಲ್‍ಗಾಂಧಿ ಅವರನ್ನು ದೋಷಿ ಎಂದು ಸಾಬೀತುಪಡಿಸಲು, ಅವರನ್ನು ಲೋಕಸಭೆ ಸದಸ್ಯತ್ವ ಸ್ಥಾನದಿಂದ ಅನರ್ಹ ಗೊಳಿಸಲು ಕಾರಣವಾಗುವ ಎಲ್ಲಾ ಸೇಡಿನ ಕ್ರಮಗಳನ್ನು ಅನುಸರಿಸುತ್ತಿದೆ ಎಂದು ದೂರಿದ್ದಾರೆ.

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಹೆಚ್.ಎಸ್. ಸುಂದರೇಶ್ ಮಾತನಾಡಿ, ರಾಹುಲ್‍ಗಾಂಧಿ ಅವರಿಗೆ ನೀಡಿರುವ ಶಿಕ್ಷೆ ಮತ್ತು ಅನರ್ಹತೆಯನ್ನು ಕಾಂಗ್ರೆಸ್ ಮಾತ್ರವಲ್ಲ. ಇಡೀ ರಾಷ್ಟ್ರವೇ ಖಂಡಿಸುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

RELATED ARTICLES

Related Articles

TRENDING ARTICLES