Wednesday, January 22, 2025

ವೇಣುಗೋಪಾಲ ಕೊಲೆಗೆ ಬಿಜೆಪಿ ಧರ್ಮದ ಕಲರ್ ಕೊಡ್ತಿದೆ : ಸಚಿವ ಮಹದೇವಪ್ಪ

ಮೈಸೂರು : ಎಲ್ಲದಕ್ಕೂ ಹಿಂದೂತ್ವದ ಅಜೆಂಡಾ ಫಿಕ್ಸ್ ಮಾಡೋದು ಬಿಜೆಪಿ ಚಾಳಿ ಎಂದು ಬಿಜೆಪಿ ನಾಯಕರ ವಿರುದ್ಧ ಸಚಿವ ಡಾ.ಎಚ್.ಸಿ ಮಹದೇವಪ್ಪ ವಾಗ್ದಾಳಿ ನಡೆಸಿದರು.

ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇಣುಗೋಪಾಲ ನಾಯಕ ಹತ್ಯೆ ಧರ್ಮ ಹಾಗೂ ರಾಜಕೀಯ ವ್ಯಾಪ್ತಿ ಎರಡುಕ್ಕೂ ಬರಲ್ಲ. ಈ ವಿಷಯದಲ್ಲಿ ರಾಜಕೀಯ ಪಿತೂರಿ ಮಾಡಬಾರದು ಎಂದರು.

ವೇಣುಗೋಪಾಲ ನಾಯಕ ಕೊಲೆಗೆ ಹಿಂದೂತ್ವದ ಅಜೆಂಡಾ ಫಿಕ್ಸ್ ಮಾಡುವ ಸಂಚನ್ನು ಬಿಜೆಪಿ ಮಾಡುತ್ತಿದೆ. ಬಿಜೆಪಿ ಈ ಆಟ ಬಹಳ ಕಾಲ ನಡೆಯಲ್ಲ. ಹತ್ಯೆಯ ಪ್ರಕರಣದಲ್ಲಿ ನನ್ನ ಮಗನ ಹೆಸರನ್ನು ಬಿಜೆಪಿ ವಿನಾಃಕಾರಣ ಎಳೆದು ತರುತ್ತಿದೆ. ನನ್ನ ಮಗನ ಮೇಲೆ ಹೀಗೆ ಹಿಂದೆಯೂ ವಿನಾಃಕಾರಣ ಆರೋಪ ಮಾಡಿದ್ದರು ಎಂದು ಗುಡುಗಿದರು.

ಇದನ್ನೂ ಓದಿ : ನಾನು ಒಕ್ಕಲಿಗ ಎಂಬ ಕಾರಣಕ್ಕೆ ಹೆಚ್‌ಡಿಕೆ ಟಾರ್ಗೆಟ್ ಮಾಡ್ತಿದ್ದಾರೆ : ಚಲುವರಾಯಸ್ವಾಮಿ

ಬಿಜೆಪಿ ಧರ್ಮದ ಕಲರ್ ಕೊಡ್ತಿದೆ

ಮಾಫಿಯಾ ಮಾಡಿದ್ದವರೆ ಹಿಂದೆಯೂ ಮಗನ ಮೇಲೆ ಕೇಸ್ ಕೊಟ್ಟಿದ್ದರು. ಬಿಜೆಪಿ ಅವರು ಸುಳ್ಳುನ್ನು ಸತ್ಯ ಮಾಡಲು ಹೊರಟಿದ್ದಾರೆ. ಪೊಲೀಸರ ತನಿಖೆ ಸರಿ ದಾರಿಯಲ್ಲಿ ಇದೆ. ಘಟನೆಯಾದ 6 ಗಂಟೆಯೊಳಗೆ ಆರೋಪಿಗಳ ಬಂಧಿಸಿದ್ದಾರೆ. ಧರ್ಮದ ಕಲರ್ ಕೊಡಲು ಬಿಜೆಪಿ ಹೊರಟ್ಟಿದ್ದಾರೆ ಎಂದು ಕಿಡಿಕಾರಿದರು.

ಈ ಕೊಲೆ ದೌರ್ಜನ್ಯ ಪ್ರಕರಣ ಅಲ್ಲ. ಆದರೆ, ಎಸ್ಸಿ-ಎಸ್ಟಿ ಸಮುದಾಯದ ಯಾರಾದರೂ ಈ ರೀತಿ ಕೊಲೆಯಾದರೆ 8 ಲಕ್ಷ ರೂಪಾಯಿ ಪರಿಹಾರ ಕೊಡಬಹುದು. ಪರಿಹಾರದ ಮೊದಲ ಕಂತು 4.12 ಲಕ್ಷ ರೂ. ಈಗ ಕೊಟ್ಟಿದ್ದೇವೆ. ಪ್ರಕರಣದ ಚಾರ್ಜ್ ಶೀಟ್ ಆದ ಮೇಲೆ ಉಳಿದ ಹಣ ಕೊಡುತ್ತೇವೆ. ಕೊಲೆಯಾದ ವ್ಯಕ್ತಿಯ ಪತ್ನಿಗೆ ಅನುಕಂಪದ ಆಧಾರದ ಮೇಲೆ ಕೆಲಸ ಕೊಡಿಸಲಾಗುವುದು ಎಂದರು.

RELATED ARTICLES

Related Articles

TRENDING ARTICLES