Wednesday, January 22, 2025

ಹಾಸನದಲ್ಲಿ ಗರ್ಭಿಣಿಯರು, ಮಕ್ಕಳಿಗೆ ಕೊಳೆತ ಮೊಟ್ಟೆ ವಿತರಣೆ

ಹಾಸನ : ಗರ್ಭಿಣಿಯರು ಹಾಗೂ ಮಕ್ಕಳಿಗೆ ಅಂಗನವಾಡಿ ಕೇಂದ್ರದಲ್ಲಿ ಕೊಳೆತ ಮೊಟ್ಟೆ ವಿತರಣೆ ಮಾಡಿರುವ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಲಕ್ಷ್ಮಿಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ನಾಲ್ಕು ದಿನಗಳ ಅಂತರದಲ್ಲಿ ಹೊಳೆನರಸೀಪುರದಲ್ಲಿ ಎರಡನೇ ಪ್ರಕರಣ ಬೆಳಕಿಗೆ ಬಂದಿದೆ.

ಗರ್ಭಿಣಿಯರು ಹಾಗೂ ಮಕ್ಕಳಿಗೆ ಕೆಟ್ಟು ಹೋಗಿರುವ ಕೋಳಿ ಮೊಟ್ಟೆಗಳನ್ನು ವಿತರಣೆ ಮಾಡಲಾಗಿದೆ. ಮೊಟ್ಟೆ ಬೇಯಿಸಿ ಸಿಪ್ಪೆ ತೆಗೆದಾಗ ಕೊಳೆತಿದಿರುವುದು ಬೆಳಕಿಗೆ ಬಂದಿದೆ. ಇದನ್ನು ಕಂಡ ಗರ್ಭಿಣಿಯರು ಮೊಟ್ಟೆ ಪೂರೈಕೆ ಮಾಡುತ್ತಿರುವವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನು ಓದಿ : ಜಯಚಂದ್ರ ಈ ಬಾರಿ ಚುನಾವಣೆ ಹೇಗೆ ಮಾಡಿದ್ರು ಅಂತ ನನಗೆ ಗೊತ್ತಿದೆ : ಹೆಚ್.ಡಿ ಕುಮಾರಸ್ವಾಮಿ

ಗುತ್ತಿಗೆದಾರನನ್ನ ಕಪ್ಪು ಪಟ್ಟಿಗೆ ಸೇರಿಸಿ

ಅಂಗನವಾಡಿಯಲ್ಲಿ ಹಳೆಯ ಹಾಗೂ ಕಳಪೆ ಗುಣಮಟ್ಟದ ಮೊಟ್ಟೆಗಳನ್ನು ವಿತರಣೆ ಮಾಡಿದ್ದಾರೆ. ಒಂದು ವೇಳೆ ಮಕ್ಕಳು ಮೊಟ್ಟೆ ತಿಂದಿದ್ದರೆ ಅನಾಹುತವೇ ಸಂಭವಿಸುತ್ತಿತ್ತು. ಕೂಡಲೇ ಮೊಟ್ಟೆ ಪೂರೈಕೆ ಮಾಡುತ್ತಿರುವ ಗುತ್ತಿಗೆದಾರನ ವಿರುದ್ಧ ಕ್ರಮಕೈಗೊಳ್ಳಬೇಕು. ಆತನನ್ನು ಬ್ಲಾಕ್ ಲಿಸ್ಟ್‌ಗೆ ಸೇರಿಸಬೇಕು ಎಂದು ಆಗ್ರಹಿಸಿದ್ದಾರೆ.

ಅಧಿಕಾರಿಗಳು ಶಾಮೀಲು

ಕಳೆದ ಗುರುವಾರ ಹೊಳೆನರಸೀಪುರ ಪಟ್ಟಣದ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಯರಿಗೆ ಕೆಟ್ಟ ಮೊಟ್ಟೆಗಳನ್ನು ವಿತರಿಸಲಾಗಿತ್ತು. ಇದೀಗ ಹೊಳೆನರಸೀಪುರ ತಾಲ್ಲೂಕಿನಲ್ಲಿ ಮತ್ತೊಂದು ಅಂಗನವಾಡಿ ಕೇಂದ್ರದಲ್ಲಿ ಕೊಳೆತ ಮೊಟ್ಟೆ ವಿತರಣೆ‌ ಮಾಡಲಾಗಿದೆ. ಗುತ್ತಿಗೆದಾರನೊಂದಿಗೆ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

RELATED ARTICLES

Related Articles

TRENDING ARTICLES