Monday, December 23, 2024

ನಾನು ಒಕ್ಕಲಿಗ ಎಂಬ ಕಾರಣಕ್ಕೆ ಹೆಚ್‌ಡಿಕೆ ಟಾರ್ಗೆಟ್ ಮಾಡ್ತಿದ್ದಾರೆ : ಚಲುವರಾಯಸ್ವಾಮಿ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.​ಡಿ ಕುಮಾರಸ್ವಾಮಿ ವಿರುದ್ಧ ಕೃಷಿ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.

ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಒಕ್ಕಲಿಗ ಎಂಬ ಕಾರಣಕ್ಕೆ ಹೆಚ್.​ಡಿ ಕುಮಾರಸ್ವಾಮಿ ನನ್ನನ್ನು ಟಾರ್ಗೆಟ್​ ಮಾಡುತ್ತಿದ್ದಾರೆ ಎಂದು ಗುಡುಗಿದರು.

ನಾನು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಅವರ ಕುಟುಂಬದ ಬಗ್ಗೆ ಮಾತನಾಡಿಲ್ಲ. ಹೆಚ್.ಡಿ ಕುಮಾರಸ್ವಾಮಿ ವಿಚಾರ ಎತ್ತಿದ್ರೆ ಸಾಕು ಕುಟುಂಬ ಅಂತಾರೆ. ಕುಮಾರಸ್ವಾಮಿ ಯಾವಾಗಲೂ ಕುಟುಂಬದ ಜಪ ಮಾಡಬಾರದು ಎಂದು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ : ನಿಮ್ಮನ್ನ ವಿಪಕ್ಷ ನಾಯಕ ಮಾಡಲ್ಲ : ಯತ್ನಾಳ್ ಗೆ ರಾಜಣ್ಣ ಕೌಂಟರ್

ದೇವೇಗೌಡರ ಬಗ್ಗೆ ಅಪಾರ ಗೌರವವಿದೆ

ಹೆಚ್.ದೇವೇಗೌಡರ ಬಗ್ಗೆ ಅಪಾರ ಗೌರವವಿದೆ. ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ನಾವು ತಪ್ಪಾಗಿ ಮಾತನಾಡಿಲ್ಲ. ಲೋಕಸಭಾ ಚುನಾವಣೆ ಇದೆ. ಹಾಗಾಗಿ ನನ್ನ ಮಂಡ್ಯ ಅಂತಿದ್ದಾರೆ. ಹೆಚ್.ಡಿ ಕುಮಾರಸ್ವಾಮಿ ಅವರು  ಹತಾಶರಾಗಿದ್ದಾರೋ ಏನೋ ಗೊತ್ತಿಲ್ಲ ಎಂದು ಎಂದು ಕುಟುಕಿದರು.

ವರ್ಗಾವಣೆ ದಂಧೆ ಬಗ್ಗೆ ಕುಮಾರಸ್ವಾಮಿ ರೇಟ್‌ ಕಾರ್ಡ್‌ ಬಿಡುಗಡೆ ವಿಚಾರ ಸಂಬಂಧ ಮಾತನಾಡಿ, ಕುಮಾರಸ್ವಾಮಿ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡುತ್ತಾರೆ ಎಂದು ಚಲುವರಾಯಸ್ವಾಮಿ ಹೇಳಿದರು.

RELATED ARTICLES

Related Articles

TRENDING ARTICLES