Monday, December 23, 2024

ಸಿಎಂ ಸಿದ್ದರಾಮಯ್ಯಗೆ ಡಾ.ವೀರೇಂದ್ರ ಹೆಗ್ಗಡೆ ಮೆಚ್ಚುಗೆ ಪತ್ರ !

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 14ನೇ ಬಜೆಟ್​ನ ಫಲಶೃತಿ ಮತ್ತು ಶಕ್ತಿ ಯೋಜನೆಗಳಿಗೆ ಸಿಕ್ಕಿರುವ ಜನಮನ್ನಣೆಗೆ ಮೆಚ್ಚುಗೆ ವ್ಯಕ್ತಿಪಡಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಮದ್ಯ ಪ್ರಿಯರಿಗೆ ಶಾಕ್​! ಜುಲೈ 20 ರಿಂದ ಬೆಲೆ ಏರಿಕೆ ಬಿಸಿ, ಯಾವ ಬ್ರಾಂಡ್ ಎಷ್ಟು.

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬರೆದಿರುವ ಪತ್ರದಲ್ಲಿ, ಶಕ್ತಿ ಯೋಜನೆಯಿಂದ ಧರ್ಮಸ್ಥಳ ಕ್ಷೇತ್ರಕ್ಕೆ ಬರುತ್ತಿರುವ ಭಕ್ತರು, ವಿಶೇಷವಾಗಿ ಮಹಿಳೆಯರು ಸಂತೋಷ ವ್ಯಕ್ತಡಿಸುತ್ತಿದ್ದಾರೆ, ಅನೇಕ ಮಹಿಳೆಯರು ನಿಮ್ಮ ಹೆಸರಿನಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆ.

ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ ಪ್ರೋತ್ಸಾಹಿಸಿರುವ ವಿಚಾರ ತಿಳಿದು ಇಡೀ ಸಮಾಜಕ್ಕೆ ಸಂತೋಷವಾಗಿದೆ. ಎಲ್ಲರ ಪರವಾಗಿ ಅಭಿನಂದನೆಗಳು.

ಅವಕಾಶವಿದ್ದಾಗ ಕ್ಷೇತ್ರಕ್ಕೆ ಬಂದು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ಹೋಗಬೇಕಾಗಿ ಅಪೇಕ್ಷೆ. ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹವಿರಲಿ ಎಂದು ಬರೆದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

RELATED ARTICLES

Related Articles

TRENDING ARTICLES