ಬೆಂಗಳೂರು : ಹಾಲಿನ ದರ ಹೆಚ್ಚಳ ಮಾಡಲು ಕೆಎಂಎಫ್(ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ) ತೀರ್ಮಾನಿಸಿದ್ದು ಇಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಜೊತೆ ಮಹತ್ವದ ಸಭೆ ನಡೆಯಲಿದೆ.
ಇದನ್ನೂ ಓದಿ: ಟ್ಯಾಕ್ಸ್ ಕೊಡಿ ಅಂತ ನಾವು ನಿಮ್ಮ ಮುಂದೆ ಭಿಕ್ಷೆ ಬೇಡಬೇಕಾ? : ಶಿವಲಿಂಗೇಗೌಡ ಗುಡುಗು
ಹಾಲಿನ ದರ ಹೆಚ್ಚಳದಿಂದ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದ್ದು, ಇಂದು ಸಂಜೆ 5.30 ಕ್ಕೆ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ನಡೆಯಲಿರುವ ಸಭೆಯಲ್ಲಿ ಕೆಎಂಎಫ್ ಅಧಿಕಾರಿಗಳು ಹಾಲಿನದರ ಹೆಚ್ಚಳದ ಪ್ರಸ್ತಾವನೆಯನ್ನು ಸಿಎಂ ಸಿದ್ದರಾಮಯ್ಯ ಮುಂದಿಡಲಿದೆ.
ರೈತರಿಂದ ಖರೀದಿ ಮಾಡುಲಾಗುತ್ತಿರುವ ಹಾಲಿನ ಮೇಲೆ ಪ್ರೋತ್ಸಾಹ ದರವನ್ನು ಹೆಚ್ಚಿಸುವ ಬಗ್ಗೆಯೂ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿ ಕ್ರಮ ಕೈಗೊಳ್ಳುವ ಸಾಧ್ಯತೆ ಇದ್ದು ಸಭೆಯ ಬಳಿಕ ಹಾಲಿನ ದರ ಏರಿಕೆಯ ಬಗ್ಗೆ ಸ್ಪಷ್ಟತೆ ಸಿಗಲಿದೆ.