Saturday, May 18, 2024

ಮೃತಪಟ್ಟ KSRTC ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ : ರಾಮಲಿಂಗಾರೆಡ್ಡಿ

ಬೆಂಗಳೂರು : ಅಪಘಾತದಲ್ಲಿ ಮೃತಪಟ್ಟ ಕೆಎಸ್ಸಾರ್ಟಿಸಿ ಚಾಲನಾ ಸಿಬ್ಬಂದಿ ಜಿ.ವಿ ಚಲಪತಿ ಹಾಗೂ ಪಿ.ಎನ್ ನಾಗರಾಜು ಅವರ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ನೀಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಬೆಂಗಳೂರಿನ ಕರಾರಸಾ ನಿಗಮದ ಕೇಂದ್ರ ಕಚೇರಿಯಲ್ಲಿ  ಪರಿಹಾರ ಚೆಕ್ ವಿತರಿಸಿದ ಬಳಿಕ ಅವರು ಮಾತನಾಡಿದರು.

ಕೆಎಸ್ಸಾರ್ಟಿಸಿಯು ದೇಶದಲ್ಲಿಯೇ ಪ್ರಪ್ರಥಮವಾಗಿ ಕಾರ್ಮಿಕ ಕಲ್ಯಾಣದ ವಿನೂತನ ಯೋಜನೆ ಅಡಿಯಲ್ಲಿ ಸಿಬ್ಬಂದಿಗಳಿಗೆ 1 ಕೋಟಿ ಮೊತ್ತದ ಅಪಘಾತ ವಿಮೆಯನ್ನು (On duty and Off Duty ಅಪಘಾತ) ಜಾರಿಗೊಳಿಸಿದೆ ಎಂದರು.

ಮೃತಪಟ್ಟ ಚಾಲನಾ ಸಿಬ್ಬಂದಿಗಳನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ, ಅವರ ಕುಟುಂಬಗಳ ಸುಭದ್ರತೆಗಾಗಿ ನಿಗಮವು ಜಾರಿಗೊಳಿಸಿರುವ ಈ ಅಪಘಾತ ಪರಿಹಾರ ವಿಮಾ ಯೋಜನೆಯು ಬಹಳ ಉತ್ತಮವಾಗಿದೆ. ಈ ಯೋಜನೆಯನ್ನು ಸದ್ಯದಲ್ಲಿಯೇ ಇತರೆ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಜಾರಿಗೊಳಿಸಲು ಕೂಡಲೇ  ಕ್ರಮ ಜರುಗಿಸಲು ಸೂಚಿಸಲಾಗುವುದು ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ : KSRTC ನೌಕರರಿಗೆ ಗುಡ್​​​​ ನ್ಯೂಸ್​

ಸಿಬ್ಬಂದಿ ಹಿತಾಸಕ್ತಿ ಕಾಪಾಡಲು ಸದಾ ಸಿದ್ದ

ಕುಟುಂಬದವರು ಹಣವನ್ನು‌ ಬ್ಯಾಂಕಿನಲ್ಲಿ ಸ್ಥಿರ ಠೇವಣಿಯನ್ನು ಇಟ್ಟು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಾಗೂ ತಮ್ಮ ಮುಂದಿನ ಜೀವನಕ್ಕಾಗಿ ಕಾಪಾಡಿಕೊಳ್ಳಬೇಕು. ನಿಗಮದ ಸಿಬ್ಬಂದಿಗಳ ಹಾಗೂ ಕುಟುಂಬದವರ  ಹಿತಾಸಕ್ತಿ ಕಾಪಾಡಲು ನಾವು ಸದಾ ಸಿದ್ದರಿದ್ದೇವೆ ಎಂದು ರಾಮಲಿಂಗಾರೆಡ್ಡಿ ಹೇಳಿದರು.

ಈ ಸಂದರ್ಭದಲ್ಲಿ ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್, ಎಸ್ ಬಿಐ ಬ್ಯಾಂಕಿನ ವ್ಯವಸ್ಥಾಪಕ ಹೆಚ್.ವಿ. ಅನಂತ ಸುಬ್ಬರಾವ್, ಬಿ. ಜಯದೇವರಾಜೇ ಅರಸು, ಜಿ.ಎಸ್ ಮಹದೇವಯ್ಯ, ಹೆಚ್.ಡಿ ರೇವಪ್ಪ, ಎಸ್ ನಾಗರಾಜ, ವೆಂಕಟರಮಣಪ್ಪ ಮತ್ತಿತರಿದ್ದರು.

RELATED ARTICLES

Related Articles

TRENDING ARTICLES