Sunday, December 22, 2024

ಬಿಡಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ

ವಿಜಯನಗರ : ಹೊಸಪೇಟೆ ತಾಲೂಕಿನಲ್ಲಿರುವ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ.

ವಿಧಾನಸಭಾ ಚುನಾವಣೆ ಬಳಿಕ ಯಾವುದೇ ಕಾರ್ಯಕ್ರಮಕ್ಕೂ ಆನಂದ್ ಸಿಂಗ್ ಹೆಚ್ಚಾಗಿ ಕಾಣಿಸಿಕೊಂಡಿಲ್ಲ. ಬಿಡಿಸಿಸಿ ಬ್ಯಾಂಕ್ ಅಧಿಕಾರದ ಅವಧಿ ಇನ್ನೂ ಎರಡು ವರ್ಷಗಳ ಕಾಲ ಇದ್ದು, ಅವಧಿ ಮುನ್ನವೇ ರಾಜೀನಾಮೆ ನೀಡಿದ್ದು ಹಲವಾರು ಅನುಮಾನಕ್ಕೆ ಕಾರಣವಾಗಿದೆ.

ಕಳೆದ ಚುನಾವಣೆಯಲ್ಲಿ ಮಗನ ಸೋಲಿನ ಬಳಿಕ ಯಾವುದೇ ರಾಜಕೀಯ ಕಾರ್ಯಕ್ರಮದಲ್ಲಿ ಆನಂದ್ ಸಿಂಗ್ ಭಾಗಿಯಾಗಿಲ್ಲ. ಹೀಗಾಗಿ ಆನಂದ್ ಸಿಂಗ್ ರಾಜಕೀಯ ನಿವೃತ್ತಿ ಪಡೆದ್ರಾ ಎನ್ನುವ ಪ್ರಶ್ನೆ ಎದ್ದಿದೆ.

RELATED ARTICLES

Related Articles

TRENDING ARTICLES