ಬೆಂಗಳೂರು : ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕಾರ ಪ್ರಕ್ರಿಯೆಗೆ ಜುಲೈ 17 ರಂದು ರಾಷ್ಟ್ರೀಯ ನಾಯಕರಿಂದ ಚಾಲನೆ ಕೊಡಿಸಲಿದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಇದನ್ನೂ ಓದಿ: ಫ್ಲೈಓವರ್ ಮೇಲೆ ಸ್ಕೂಟರ್ ಅಡ್ಡಗಟ್ಟಿ 1.7ಕೋಟಿ ಮೌಲ್ಯದ ಚಿನ್ನ ರಾಬರಿ!
ನಗದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಮನೆಯೊಡತಿ ಖಾತೆಗೆ 2 ಸಾವಿರ ಹಣ ಜಮೆ ಯೋಜನೆಗೆ ಜುಲೈ 17 ರಂದು ಸೋಮವಾರ ಸಂಜೆ 5 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಷ್ಟ್ರೀಯ ನಾಯಕರಿಂದ ಚಾಲನೆ ನೀಡಲು ಸಿದ್ದತೆ ಮಾಡಿಕೊಳ್ಳಲಾಗಿದೆ.
ಒಂದು ವೇಳೆ ರಾಷ್ಟ್ರೀಯ ನಾಯಕರಿಂದ ಈ ಯೋಜನೆಗೆ ಚಾಲನೆ ದೊರೆಯದಿದ್ದರೇ ಜುಲೈ19 ರಂದು ಸಂಜೆ 5 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಚಾಲನೆ ದೊರೆಯಲಿದೆ ಎಂದರು.
ಈಗಾಗಲೇ ತಿಳಿಸಿರುವಂತೆ ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವಂತೆ ಮಹಿಳೆಯು ಈ ಯೋಜನೆಯ ಫಲಾನುಭವಿಯಾಗಿರುತ್ತಾರೆ. ಫಲಾನುಭವಿಗಳು ಅತ್ತೆಯಾಗಬೇಕ ಅಥವಾ ಸೊಸೆಯಾಗಬೇಕೆ ಎನ್ನುವ ವಿಚಾರವನ್ನು ಅರ್ಜಿಯಲ್ಲಿ ನಮೂದಿಸಿ ಸಲ್ಲಿಸಬೇಕು. ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್ಟಿ ಪಾವತಿದಾರರಾಗುರತಕ್ಕದ್ದಲ್ಲ ಎಂದಿದ್ದಾರೆ.
ಇದನ್ನೂ ಓದಿ: ಬಿಸಿಯೂಟ ಸಿಬ್ಬಂದಿಗಳಿಗೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ
ಗೃಹಲಕ್ಷ್ಮಿ ಯೋಜನೆಗೆ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ಬಾಪೂಜಿ ಸೇವಾ ಯೋಜನೆ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ, ಎಪಿಎಲ್, ಬಿಪಿಎಲ್ ಅಂತ್ಯೋದಯ ಕಾರ್ಡ್ ನವರು ಈ ಯೋಜನೆ ಫಲಾನುಭವಿಗಳಾಗಿರುತ್ತಾರೆ. ಅರ್ಜಿಸಲ್ಲಿಕೆಗೆ ಯಾವುದೆ ಕೊನೆಯ ದಿನಾಂಕ ಇರುವುದಿಲ್ಲ.
ಗೃಹಲಕ್ಷ್ಮಿ ಯೋಜನೆಗೆ ಫಲಾನುಭವಿಗಳು ಯಾರಾಗಬೇಕೆನ್ನುವ ಗೊಂದಲವನ್ನು ಪರಿಹರಿಸಲು ಪ್ರಜಾ ಪ್ರತಿನಿಧಿಗಳನ್ನ ನೇಮಿಸಲಾಗುತ್ತಿದೆ. ಇವರು ಮನೆ ಬಾಗಿಲಿಗೆ ಹೋಗಿ ಮಾಹಿತಿ ಸಂಗ್ರಹ ಮಾಡುತ್ತಾರೆ. ಇದು ಕೂಡ ಉಚಿತವಾಗಿ ಮಾಡಲಾಗುವ ಪ್ರಕ್ರಿಯೆಯಾಗಿದ್ದು ಪ್ರಜಾಪ್ರಯಿನಿಧಿಗಳು ಹಣ ಕೇಳಿದಲ್ಲಿ ಇಲಾಖೆ ಗಮನಕ್ಕೆ ತರಬಹುದು ಎಂದಿದ್ದಾರೆ.
ಹೆಚ್ಚಿನ ಮಾಹಿತಿ ಈ ಕೆಳಕಂಡ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದ :
8147500500 ಮೊಬೈಲ್ ಸಂಖ್ಯೆ ಗೆ ಎಸ್ ಎಮ್ ಎಸ್ ಮಾಡಿ ಪರಿಶೀಲನೆ ಮಾಡಬಹುದು. 1902 ಹೆಲ್ಪ್ ಲೈನ್ ಗೆ ಕರೆ ಮಾಡಿ ಏನಾದರು ಸಮಸ್ಯೆ ಇದ್ದರೆ ಬಗೆಹರಿಕೊಳ್ಳಬಹುದು ಎಂದು ತಿಳಿಸಿದ್ದಾರೆ.