ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಜಾರಿಗೆ ಇಂದು ಮುಹೂರ್ತ ಫಿಕ್ಸ್ ಆಗುವ ಸಾಧ್ಯ ಇದೆ, ಇದೇ ವಿಚಾರವಾಗಿ ಇಂದು ಸಚಿವೆ ಲಕ್ಷ್ಮಿಹೆಬ್ಬಾಳಕರ್ ಸುದ್ದಿಗೋಷ್ಟಿ ನಡೆಸಲಿದ್ದಾರೆ.
ಇದನ್ನೂ ಓದಿ: ವಂಶಿಕಾ ಹೆಸರಲ್ಲಿ ವಂಚಿಸುತ್ತಿದ್ದ ನಿಶಾ,ಕೋರ್ಟ್ ಗೆ ಹಾಜರಪಡಿಸಿದ ಪೋಲಿಸರು
ಗೃಹಜ್ಯೋತಿ ಜಾರಿಗೆ ಸಂಬಂಧಿಸಿ ಇಂದು ಬೆಳಗ್ಗೆ 11ಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪತ್ರಿಕಾಗೋಷ್ಟಿ ನಡೆಸಲಿದ್ದು ಅರ್ಜಿ ಸಲ್ಲಿಕೆ ಕುರಿತು ಮಾಹಿತಿ ಹಂಚಿಕೊಳ್ಳಲಿದ್ದಾರೆ. ಇದೇ ವೇಳೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ.
ಗೃಹಲಕ್ಷ್ಮಿ ಯೋಜನೆ ಜಾರಿ ವಿಚಾರವಾಗಿ ಪ್ರಜಾಪ್ರತಿನಿಧಿಯನ್ನು ಗೌರವಧನದ ಆಧಾರದಲ್ಲಿ ನೇಮಕಕ್ಕೆ ಸರ್ಕಾರ ನಿರ್ಧಾರ ಮಾಡಿದ್ದು ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ, 1 ಗ್ರಾಮಕ್ಕೆ ಇಬ್ಬರು ಪ್ರಜಾಪ್ರತಿನಿಧಿಗಳ ನೇಮಕ ಅದರಲ್ಲಿ ಒಬ್ಬರು ಮಹಿಳಾ ಪ್ರಜಾಪ್ರತಿನಿಧಿ ಆಯ್ಕೆ ಕಡ್ಡಾಯ. 1 ತಿಂಗಳ ಮಟ್ಟಿಗೆ ಮಾತ್ರ ಪ್ರಜಾಪ್ರತಿನಿಧಿಗಳ ನೇಮಕ ಮಾಡಲು ಸಿದ್ದತೆ ಮಾಡಿಕೊಳ್ಳಲಾಗಿದೆ.
ಈ ಕುರಿತು ಎಲ್ಲಾ ಮಾಹಿತಿಗಳನ್ನು ಇಂದಿನ ಪತ್ರಿಕಾಗೊಷ್ಟಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹಂಚಿಕೊಳ್ಳುವ ಸಾಧ್ಯತೆ ಇದೆ.