Wednesday, January 22, 2025

ಭಾರತ್ ಜೋಡೋ ಬಿಜೆಪಿಗೆ ಭಯ ಹುಟ್ಟಿಸಿದೆ : ಸಚಿವ ಸಂತೋಷ್ ಲಾಡ್

ಧಾರವಾಡ : ಭಾರತ್ ಜೋಡೋ ಬಿಜೆಪಿಗೆ ಭಯ ಹುಟ್ಟಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಕುಟುಕಿದರು.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಎದುರಾಗಿದೆ ಎಂದು ಛೇಡಿಸಿದರು.

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರ ಕುರಿತು ಮಾತನಾಡಿ, ರಾಜಕೀಯ ಪಕ್ಷಗಳು ಆಗಾಗ ಮೈತ್ರಿ ಮಾಡಿಕೊಳ್ಳುತ್ತವೆ. ನಾವು ಕಳೆದ ಬಾರಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ಮೈತ್ರಿ ಮಾಡಿಕೊಳ್ಳುವುದು ಬಿಜೆಪಿ , ಜೆಡಿಎಸ್ ಪಕ್ಷಗಳ ನಿಲುವು ಎಂದು ಜಾಣ್ಮೆಯ ಉತ್ತರ ನೀಡಿದರು.

ಇದನ್ನೂ ಓದಿ : ಪೆನ್​ ಡ್ರೈವ್​ ರಹಸ್ಯ ರಿಲೀಸ್​ ಗೆ ಡೇಟ್​ ಫಿಕ್ಸ್ ಮಾಡಿದ ಕುಮಾರಸ್ವಾಮಿ!

ಅದಾನಿ-ಮೋದಿಗೆ ಏನು ಸಂಬಂಧ?

ಬಿಜೆಪಿ ಬೆಂಕಿ ಹಂಚುವ ಕೆಲಸ ಮಾಡುತ್ತಿದ್ದಾರೆ. ಧರ್ಮ ಧರ್ಮಗಳ ಮಧ್ಯೆ ಬಿರುಕು ಮೂಡಿಸುವ ಕೆಲಸ ಮಾಡಿದ್ದಾರೆ. ರಾಹುಲ್ ಗಾಂಧಿ ಅವರು ಅದಾನಿ ಮತ್ತು ಪ್ರಧಾನಿ ನರೇಂದ್ರ ಮೋದಿಗೆ ಏನು ಸಂಬಂಧ ಎಂದು ಕೇಳುವುದಕ್ಕೆ ಶುರು ಮಾಡಿದ್ದಾರೆ. ಆಗ ಅವರನ್ನು ಅಸಂವಿಧಾನಿಕ ಪದದ ಲೋಪದೋಷ ಪದ ಹುಡುಕಿ ಲೋಕಸಭಾ ಸದಸ್ಯತ್ವ ಅನರ್ಹ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಲೋಕಸಭಾ ಚುನಾವಣೆ ಕುರಿತು ಮಾತನಾಡಿದ ಅವರು, ದೇಶದ ಜನತೆ ಎಲ್ಲವನ್ನು ನೋಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ದೇಶದಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದು ಸಚಿವ ಸಂತೋಷ್ ಲಾಡ್ ವಿಶ್ವಾಸ ವ್ಯಕ್ತಪಡಿಸಿದರು.

RELATED ARTICLES

Related Articles

TRENDING ARTICLES