Sunday, January 19, 2025

ಪಂಚಾಯಿತಿ ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾದ ಸಿಬ್ಬಂದಿ

ಧಾರವಾಡ : ಪಂಚಾಯತಿ ಕಚೇರಿಯಲ್ಲಿಯೇ ಸಿಬ್ಬಂದಿಯೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಸಗರಪ್ಪ ಚಕ್ಕೊಟಿ (40) ಆತ್ಮಹತ್ಯೆ ಮಾಡಿಕೊಂಡ ಸಿಬ್ಬಂದಿ. ನವಲಗುಂದ ತಾಲೂಕು ಪಂಚಾಯತಿಯಲ್ಲಿ ಈ ಘಟನೆ ನಡೆದಿದೆ.

ಮೃತ ಸಗರಪ್ಪ ಚಕ್ಕೂಟಿ ನವಲಗುಂದ ತಾಲೂಕು ಪಂಚಾಯತಿನಲ್ಲಿ ನೋಡಲ್ ಆಫೀಸರ್ ಆಗಿದ್ದರು. ಅಧಿಕಾರಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬೆಳಗ್ಗೆ 10 ಗಂಟೆ ಸೂಮರಿನಲ್ಲಿ ನೇಣು ಹಾಕಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ವರದಕ್ಷಿಣೆ ಆಸೆಗೆ ಪತ್ನಿಯನ್ನೇ ಕೊಂದ ಪಾಪಿ ಪತಿ

ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ನವಲಗುಂದ ಪಿಎಸ್ಐ ಭೇಟಿ ಪರಿಶಿಲನೆ ನಡೆಸಿದ್ದಾರೆ. ಈ ಸಂಬಂಧ ನವಲಗುಂದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾವು ಕಚ್ಚಿ ಮಹಿಳೆ ಸಾವು

ಹಾವು ಕಚ್ಚಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹೊಡೆಬಿರನಹಳ್ಳಿ ಗ್ರಾಮದಲ್ಲಿ ನಡೆದಿದೆ. ನರಸಮ್ಮ ನರಸಪ್ಪ(35) ಮೃತ ಮಹಿಳೆ. ನಿನ್ನೆ ಸಂಜೆ ಜಮೀನಿನಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿತ್ತು. ಆಸ್ಪತ್ರೆಗೆ ರವಾನಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.

RELATED ARTICLES

Related Articles

TRENDING ARTICLES