Wednesday, January 22, 2025

ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ

ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ವಿವಿಧ ಹಿಂದೂ ಸಂಘಟನೆಗಳ ಮುಖಂಡರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು ಮಾಡುತ್ತಿದ್ದಾರೆ. ಹಾಗೆಯೇ ಸುಳ್ಳು ದಾಖಲೆಗಳನ್ನು ದಾಖಲಿಸುವ ಮೂಲಕ ನಮ್ಮ ಹಿಂದೂ ಕಾರ್ಯಕರ್ತರನ್ನು ಥಳಿಸುವ ಕೆಲಸ ಆಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶವನ್ನು ವ್ಯಕ್ತ ಪಡಿಸಿದರು.

ಯುವ ಬ್ರಿಗೇಡ್ ನ ಕಾರ್ಯಕರ್ತನ ಹತ್ಯೆ ನಡೆದಿರುವುದು ಖಂಡನೀಯ. ಜೈನ ಮುನಿ ಹತ್ಯೆಯ ಹಂತಕನನ್ನು ಬಂಧಿಸಿಲ್ಲ. ಕೂಡಲೇ ಪೊಲೀಸರು ಹಂತಕನನ್ನು ಪತ್ತೆ ಹಚ್ಚಬೇಕು. ಹಿಂದೂಗಳು ಜೀವಿಸಲು ಉತ್ತಮ ವಾತವರಣವಾಗಿ ಕಾಣುತ್ತಿಲ್ಲ, ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ನೀಡುವ ಜತೆಗೆ ಹಂತಕರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ : ಮೃತಪಟ್ಟ KSRTC ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ : ರಾಮಲಿಂಗಾರೆಡ್ಡಿ

ನಾಗರಕಟ್ಟೆಯ ಪೂಜೆಗೂ ನೊಟೀಸ್

ನಾಗರಕಟ್ಟೆಯ ಪೂಜೆಗೂ ನೊಟೀಸ್

ವಕ್ಫ್ ಬೋರ್ಡ್ ವಶಪಡಿಸಿಕೊಂಡ ಭೂಮಿಯನ್ನ ಮೂಲ ಮಾಲೀಕರಿಗೆ ನೀಡಬೇಕು. ಇತಿಹಾಸದಲ್ಲಿ ವೀರ ಸಾವರ್ಕರ್ ಪಠ್ಯವನ್ನು ಸೇರಿಸಬೇಕು. ನಾಗರಕಟ್ಟೆಯ ಪೂಜೆಗೂ ಪೊಲೀಸರು ನೊಟೀಸ್ ನೀಡಿದ್ದಾರೆ. ಇದು ಸರಿಯಲ್ಲ ಎಂದು ಪ್ರತಿಭಟನಾ ನಿರತ ಹಿಂದೂ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತ ಪಡಿಸಿದರು.

ಪ್ರತಿಭಟನೆಯಲ್ಲಿ ಹಿಂದೂ ಜನಜಾಗೃತಿ ಸಮಿತಿ ಕಾರ್ಯದರ್ಶಿ ಮೋಹನ್ ಗೌಡ, ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ಹಾಗೂ ಮುಖಂಡರು ಭಾಗವಹಿಸಿದ್ದರು.

RELATED ARTICLES

Related Articles

TRENDING ARTICLES