Monday, December 23, 2024

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಶಾಲಾ ಮಕ್ಕಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಶಿಕ್ಷಣ ತಜ್ಞರ ಜೊತೆ ಚರ್ಚಿಸಿ ಪುಸ್ತಕಗಳ ಹೊರೆ ಇಳಿಸಲಾಗುವುದು ಎಂದು ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಕ್ರಮ ಕೈಗೊಳ್ಳುತ್ತೇವೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆ ಮೇರೆಗೆ ಪಠ್ಯಪುಸ್ತಕಗಳ ಪರಿಷ್ಕರಣೆ ಮಾಡಲಾಗಿದೆ. ಸಪ್ಲಿಮೆಂಟರಿ ಪುಸ್ತಕಗಳನ್ನು ಈಗಾಗಲೇ ವಿದ್ಯಾರ್ಥಿಗಳಿಗೆ ತಲುಪಿಸಲಾಗಿದೆ. ಈಗಾಗಲೇ ಶಿಕ್ಷಕರ ಕೌನ್ಸಿಲಿಂಗ್ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿದ್ದು ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ : ಬಿಸಿಯೂಟ ಸಿಬ್ಬಂದಿಗಳಿಗೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

84 ಮೊಟ್ಟೆಗಳನ್ನು ವಿತರಿಸಲಾಗುತ್ತಿದೆ

ರಾಜ್ಯದ ಅನೇಕ ಕಡೆಗಳಲ್ಲಿ ಶಾಲಾ ಕಟ್ಟಡಗಳ ದುರಸ್ತಿಗು ಕ್ರಮ ವಹಿಸಲಾಗಿದೆ. ಒಂದರಿಂದ ಎಂಟನೇ ತರಗತಿವರೆಗೆ ಇದ್ದ ಮೊಟ್ಟೆ ವಿತರಣೆಯನ್ನು 10ನೇ ತರಗತಿಯ ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗಿದೆ. ಪ್ರಸ್ತುತ ವಾರಕ್ಕೆ ಎರಡು ಮೊಟ್ಟೆಗಳು ವಿತರಣೆಯಂತೆ 84 ಮೊಟ್ಟೆಗಳನ್ನು ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಅನ್ನಭಾಗ್ಯ ಯೋಜನೆ ಅಡಿ ಹೆಚ್ಚುವರಿ 5 ಕಿಲೋ ಅಕ್ಕಿಗೆ ಹಣ ವಿತರಣೆ ವಿಷಯದಲ್ಲಿ ಸಮಸ್ಯೆ ವಿಚಾರವಾಗಿ ಮಾತನಾಡಿ, ಹಲವು ಫಲಾನುಭವಿಗಳ ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ ಗಳಲ್ಲಿನ ಹೆಸರಿನ ವ್ಯತ್ಯಾಸ ಬಗ್ಗೆ ಕ್ರಮ ವಹಿಸಿ ಹಣ ತಲುಪಿಸಲಾಗುವುದು ಎಂದು ತಿಳಿಸಿದರು.

RELATED ARTICLES

Related Articles

TRENDING ARTICLES