Sunday, December 22, 2024

ಟೋಲ್ ದರ ಹೆಚ್ಚಳ, ಹೆದ್ದಾರಿಯಲ್ಲಿ ಪ್ರತಿಭಟನೆ

ರಾಮನಗರ : ಟೋಲ್ ದರ ಹೆಚ್ಚಳ, ಸರ್ವಿಸ್ ರಸ್ತೆ ಸರಿಪಡಿಸುವಂತೆ ಒತ್ತಾಯಿಸಿ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಕುಂಬಳಗೂಡು ಬಳಿಯ ಕಣಮಣಿಕಿ ಟೋಲ್ ಪ್ಲಾಜಾ ಬಳಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಹೆದ್ದಾರಿ ಪ್ರಾಧಿಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಟೋಲ್ ದರ ಹೆಚ್ಚಳದಿಂದಾಗಿ ವಾಹನ ಸವಾರರಿಗೆ ತೊಂದರೆಯಾಗ್ತಿದೆ. ಸ್ಥಳೀಯವಾಗಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

ಹೆದ್ದಾರಿ ಪ್ರಾಧಿಕಾರಕ್ಕೆ ಕನ್ನಡಪರ ಸಂಘಟನೆಗಳು ಒಂದು ತಿಂಗಳ ಗಡುವು ನೀಡಿದೆ. ಈ ವೇಳೆ ಟೋಲ್​ಗೆ ಮುತ್ತಿಗೆ ಹಾಕಲು ಕರವೇ ಕಾರ್ಯಕರ್ತರು ಯತ್ನಿಸಿದ್ದಾರೆ. ಕನ್ನಡ ಪರ ಸಂಘಟನೆ ಕಾರ್ಯಕರ್ತರನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ.

ಹಿಂದೂಗಳ ಹತ್ಯೆಗೆ ದಾವಣಗೆರೆಯಲ್ಲಿ ಪ್ರತಿಭಟನೆ

ಹಿಂದೂಗಳ ಹತ್ಯೆ ಖಂಡಿಸಿ ದಾವಣಗೆರೆ ನಗರದ ಡಿಸಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ. ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ ಸಂಘಟನೆ ಪ್ರತಿಭಟನೆ ನಡೆಸಿದೆ. ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತದೆ. ವಿವಿಧ ರೀತಿಯ ಆಕ್ರಮಣಗಳು ಆಗುತ್ತವೆ. ಸುಳ್ಳು ಕೇಸ್ ಹಾಕಿಸಿ ಥಳಿಸಲಾಗುತ್ತದೆ. ಭಯದ ವಾತಾವರಣ ನಿರ್ಮಾಣ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES

Related Articles

TRENDING ARTICLES