Thursday, December 19, 2024

ಸೀರೆ ಕಳ್ಳಿಯರಿಗೆ ಸಾರ್ವಜನಿಕರಿಂದ ಬಿತ್ತು ಧರ್ಮದೇಟು

ಯಾದಗಿರಿ : ಬುರ್ಖಾ ಧರಿಸಿ ಸೀರೆ ಕಳ್ಳತನಕ್ಕೆ ಬಂದಿದ್ದ ಕಳ್ಳಿಯರಿಗೆ ಸಾರ್ವಜನಿಕರು ಧರ್ಮದೇಟು ನೀಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಯಾದಗಿರಿ ಜಿಲ್ಲೆಯ ಸೈದಾಪುರ ಪಟ್ಟಣದ ಬಟ್ಟೆ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಬುರ್ಖಾ ಧರಿಸಿ ಗ್ರಾಹಕರ ಸೋಗಿನಲ್ಲಿ ಆಗಮಿಸಿದ ನಾಲ್ವರು ದುಬಾರಿ ಸೀರೆಗಳನ್ನು ಕಳ್ಳತನ ಮಾಡಲು ಯತ್ನಿಸಿದ್ದರು.

ಇದನ್ನೂ ಓದಿ : ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಹೆಸರಲ್ಲಿ ಲಕ್ಷ ಲಕ್ಷ ವಂಚನೆ

ಹಿಗ್ಗಾಮುಗ್ಗಾ ಥಳಿಸಿದ ಜನರು

ಅಂಗಡಿಗೆ ಆಗಮಿಸಿದಾಗ ಅಂಗಡಿ ಮಾಲೀಕರಿಗೆ ಸಂಶಯ ಬಂದಿದೆ. ಅವರ ಚಲನವಲನಗಳನ್ನು ಗಮನಿಸಿದ್ದಾರೆ. ಬಳಿಕ ಸೀರೆಗಳನ್ನು ಕಳ್ಳತನ ಮಾಡಲು ಯತ್ನಿಸುತ್ತಿದ್ದಾಗ ರೆಡ್‌ ಹ್ಯಾಂಡ್ ಆಗಿ ಸಿಬ್ಬಂದಿ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಈ ವೇಳೆ ನಾಲ್ವರು ಕಳ್ಳಿಯರನ್ನು ಹಿಡಿದ ಅಂಗಡಿಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಅಂಗಡಿಯ ಸಿಬ್ಬಂದಿ ನಾಲ್ವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸೈದಾಪುರ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಈ ಸಬಂಧ ಸೈದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES