ಚಿತ್ರದುರ್ಗ : ಇದು ರೈತಪರ ಸರ್ಕಾರ ಅಂತ ಹೇಳಲು ಸಾಧ್ಯವಾಗದು ಎಂದು ಶಿಕಾರಿಪುರ ಬಿಜೆಪಿ ಶಾಸಕ ಬಿ.ವೈ ವಿಜಯೇಂದ್ರ ಕುಟುಕಿದರು.
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಲ್ಲಿ ವೀರಶೈವ ಲಿಂಗಾಯತ ಸಮಾಜದಿಂದ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಅವರು ಮಾತನಾಡಿದರು.
ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ರೈತರನ್ನು ಮರೆತಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸದಿರುವುದು ದುರ್ದೈವದ ಸಂಗತಿ. ಕೇವಲ ಐದು ಉಚಿತ ಗ್ಯಾರಂಟಿಗಳ ಬಗ್ಗೆ ಮಾತ್ರ ಮಾತನಾಡುತ್ತಿದ್ದಾರೆ. ಬಜೆಟ್ ನಲ್ಲಿ ಕೃಷಿಗೆ ಐದುವರೆ ಸಾವಿರ ಕೋಟಿ ರೂ. ಕಡಿತ ಮಾಡಿದ್ದಾರೆ ಎಂದು ಛೇಡಿಸಿದರು.
ಇದನ್ನೂ ಓದಿ : ಡಿಕೆಶಿ ಮೇಲೆ ಸಿದ್ದರಾಮಯ್ಯ ಸೇಡು ತೀರಿಸಿಕೊಂಡಿದ್ದಾರೆ : ಬಿ.ವೈ ವಿಜಯೇಂದ್ರ
ರೈತ ವಿರೋಧಿ, ಬಡವರ ವಿರೋಧಿ
ರಾಜ್ಯದಲ್ಲಿ ಮಳೆ ಇಲ್ಲದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಲೆನಾಡಿನಲ್ಲೂ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಠಿಯಾಗಿದೆ. ರೈತ ವಿರೋಧಿ, ಬಡವರ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ವಿಪಕ್ಷವಾಗಿ ಕಿವಿ ಹಿಂಡುತ್ತೇವೆ ಎಂದು ಬಿ.ವೈ ವಿಜಯೇಂದ್ರ ಹೇಳಿದರು.
ವಿಪಕ್ಷ ನಾಯಕನ ಆಯ್ಕೆ ವಿಳಂಬ ಕುರಿತ ಸುದ್ದಿಗಾರರ ಪ್ರಶ್ನೆಗೆ, ವಿರೋಧ ಪಕ್ಷದ ನಾಯಕನ ಆಯ್ಕೆ ಬಗ್ಗೆ ಪಕ್ಷ ತೀರ್ಮಾನಿಸಲಿದೆ ಎಂದು ಜಾಣ್ಮೆಯ ಉತ್ತರ ನೀಡಿದರು.