ಹಾವೇರಿ : ವರ್ಗಾವಣೆ ದಂಧೆ ಬಗ್ಗೆ ಅಧಿವೇಶನದಲ್ಲಿ ಪ್ರಶ್ನೆ ಮಾಡಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇದರಿಂದ ಜಾರಿಕೊಳ್ಳುವ ಪ್ರಯತ್ನ ಮಾಡ್ತಿದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.
ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನಾನು ತಗೊಂಡಿಲ್ಲ ಅಂತಾರೆ. ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಕುಟುಕಿದರು.
ಪ್ರತಿಪಕ್ಷಗಳಿಗೆ ಸ್ವತಂತ್ರವಾಗಿ ಚುನಾವಣೆ ಎದುರಿಸುವ ಶಕ್ತಿ ಇಲ್ಲ. ಒಗ್ಗೂಡಿದರು ಯಾವುದೇ ಪರಿಣಾಮ ಬೀರಲ್ಲ. ಕೇವಲ ಪ್ರಧಾನಿ ನರೇಂದ್ರ ಮೋದಿಯವರನ್ನ ಸೋಲಿಸಬೇಕು ಎನ್ನುವುದು ಇವರ ಉದ್ದೇಶ. ಬೆಂಗಳೂರಿನಲ್ಲಿ ನಡೆಯುವ ಸಭೆಗೆ ಯಾವುದೇ ಮಹತ್ವ ಇಲ್ಲ ಎಂದು ಛೇಡಿಸಿದರು.
ಇದನ್ನೂ ಓದಿ : ಕಾಂಗ್ರೆಸ್ ನವರೇ ಇಷ್ಟು ಆತುರ ಏಕೆ? : ಹೆಚ್.ಡಿ ಕುಮಾರಸ್ವಾಮಿ
ಸರ್ಕಾರಕ್ಕೆ ಮಾಡೋಕೆ ಕೆಲಸ ಇಲ್ವಾ?
ಹತ್ತು ವರ್ಷದಿಂದ ಬಿಸಿಯುಟ ಕಾರ್ಯಕ್ರಮ ನಡೆಯುತ್ತಿದೆ. ಮಹಿಳೆಯರು ಬಳೆ ಹಾಕಿಕೊಂಡು ಕೆಲಸ ಮಾಡಿದ್ದಾರೆ. ಯಾವುದೇ ತೊಂದರೆ ಆಗಿಲ್ಲ. ಈಗ ಯಾಕೆ ಹೊಸ ಸುತ್ತೋಲೆ? ಸರ್ಕಾರಕ್ಕೆ ಮಾಡಲು ಬೇರೆ ಕೆಲಸ ಇಲ್ವಾ? ಹಿಂದೆಯು ಹಲವು ಸರರ್ಕಾರಗಳು ಶಿಕ್ಷಣ ಸಂಸ್ಥೆಗಳಿಗೆ ಭೂಮಿ ಕೊಟ್ಟಿದ್ದಾರೆ ಎಂದು ಹೇಳಿದರು.
ವಿಪಕ್ಷ ನಾಯಕನ ಆಯ್ಕೆ ಕುರಿತು ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ಜುಲೈ 18ರ ನಂತರ ವಿಪಕ್ಷ ನಾಯಕನ ಆಯ್ಕೆಯನ್ನು ಪಕ್ಷ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು.