Monday, December 23, 2024

ಮೋದಿಯವರನ್ನು ಸೋಲಿಸಬೇಕೆಂದು ಒಗ್ಗಟ್ಟಾಗುತ್ತಿದ್ದಾರೆ : ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿಯವರನ್ನು ಸೋಲಿಸಬೇಕು ಅಂತ ಒಗ್ಗಟ್ಟಾಗುತ್ತಿದ್ದಾರೆ. ಅದು ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಪಕ್ಷಗಳು ಇಡೀ ಭಾರತದಲ್ಲಿ ಶಕ್ತಿಯುಯವಾಗಿಲ್ಲ ಎಂದು ಕುಟುಕಿದರು.

ವಿರೋಧ ಪಕ್ಷಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಹೆಚ್ಚಿವೆ. ಅವು ಆಯಾ ರಾಜ್ಯಗಳಲ್ಲಿ ಪ್ರತಿಪಕ್ಷಗಳಾಗಿ ಕೆಲಸ ಮಾಡುತ್ತಿವೆ. ಒಕ್ಕೂಟ ರಚನೆಯಿಂದ, ನಾಳೆ ನಡೆಯುವ ಪ್ರತಿಪಕ್ಷ ಸಭೆಯಿಂದ ಯಾವುದೇ ರಾಜಕೀಯ ಲಾಭ ಆಗುವುದಿಲ್ಲ ಎಂದು ಛೇಡಿಸಿದರು.

ಇದನ್ನೂ ಓದಿ : ಮೋದಿ ವಿರುದ್ಧ ವಿಪಕ್ಷಗಳಿಗೆ ಪ್ರಧಾನಿ ಅಭ್ಯರ್ಥಿಯೇ ಇಲ್ಲ : ಎನ್. ರವಿಕುಮಾರ್

ಪ್ರತಿ ಪಕ್ಷಗಳಿಗೆ ಸ್ವಂತ ಬಲವಿಲ್ಲ

ಪ್ರತಿ ಪಕ್ಷಗಳಿಗೆ ಯಾವುದೇ ಸ್ವಂತ ಬಲವಿಲ್ಲ, ನಿರ್ಧಿಷ್ಟವಾದ ಕಾರ್ಯಕ್ರಮವಿಲ್ಲ. ಭಾರತ ದೇಶ ಜಗತ್ತಿನಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಸದೃಢವಾಗಿದೆ. ನರೇಂದ್ರ ಮೋದಿಯವರಿಗೆ ರಾಷ್ಟ್ರೀಯ ಮಟ್ಟದಲ್ಲಿ ಅಭೂತಪೂರ್ವ ಬೆಂಬಲ ಸಿಗುತ್ತಿದೆ.

ಜೆಡಿಎಸ್ ಜೊತೆ ಮೈತ್ರಿ ನಮ್ಮ ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡ್ರ ನಡುವೆ ಇರುವ ಮಾತುಕತೆ. ಈಗಾಗಲೇ ಕುಮಾರಸ್ವಾಮಿಯವರು ಕೆಲವೊಂದಿಷ್ಟು ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಮಾತುಕತೆ ಪಲಶೃತಿ ಆಧಾರದ ಮೇಲೆ ಮುಂದಿನ ರಾಜಕೀಯ ಬೆಳವಣಿಗೆ ನಡೆಯುತ್ತದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

RELATED ARTICLES

Related Articles

TRENDING ARTICLES