Wednesday, January 22, 2025

ವಂದೇ ಭಾರತ್ ರೈಲಿನ ಕೋಚ್‌ನಲ್ಲಿ ಬೆಂಕಿ, ತಪ್ಪಿದ ಅನಾಹುತ

ಬೆಂಗಳೂರು : ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಬ್ಯಾಟರಿ ಬಾಕ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಕೆಲ ಕಾಲ ಆತಂಕದ ಸ್ಥಿತಿ ನಿರ್ಮಾಣವಾಗಿತ್ತು.

ಭೋಪಾಲ್‌ನಿಂದ ದೆಹಲಿಗೆ ಹೊರಟಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಮಧ್ಯಪ್ರದೇಶದ ಕುರವೈ ಕೆತೋರಾ ಸ್ಟೇಷನ್‌ನಲ್ಲಿ ಈ ಅನಾಹುತ ಸಂಭವಿಸಿದೆ.

ಕೂಡಲೇ ಬೆಂಕಿಯನ್ನು ನಂದಿಸಲಾಗಿದೆ. ಇದರಿಂದ ಪ್ರಯಾಣಿಕರಿಗೆ ಯಾರಿಗೂ ಯಾವುದೇ ಹಾನಿ ಸಂಭವಿಸಿಲ್ಲ, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭಾರತೀಯ ರೈಲ್ವೆ ನೀಡಿದ ಮಾಹಿತಿ ಪ್ರಕಾರ, ಕೋಚೊಂದರ ಬ್ಯಾಟರಿ ಬಾಕ್ಸ್‌ನಲ್ಲಿ ಈ ಬೆಂಕಿ ಕಾಣಿಸಿಕೊಂಡಿದೆ.

ಇದನ್ನೂ ಓದಿ : ಭದ್ರಕಾಳಿ ದೇವಸ್ಥಾನಕ್ಕೆ ಕನ್ನ ಹಾಕಿದ ಕಳ್ಳರು

ರಾಣಿ ಕಮಲಾಪತಿ ರೈಲು ನಿಲ್ದಾಣದಿಂದ ದೆಹಲಿಯ ನಿಜಾಮುದ್ದೀನ್‌ ರೈಲ್ವೆ ನಿಲ್ದಾಣದತ್ತ ರೈಲು ಹೊರಟ ಸ್ವಲ್ಪ ಹೊತ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ಕೂಡಲೇ ನಂದಿಸಲಾಗಿದೆ. ಬಳಿಕ ಸಂಪೂರ್ಣ ತಪಾಸಣೆ ಬಳಿಕ ರೈಲು ಪ್ರಯಾಣ ಮುಂದುವರೆಸಿದೆ ಎಂದು ರೈಲ್ವೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬೆಂಕಿ ಕಾಣಿಸಿಕೊಂಡಿರುವ ವಿಚಾರ ತಿಳಿದು ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು ಎಂದು ರೈಲ್ವೆ ಸಿಬ್ಬಂದಿ ಹೇಳಿದ್ದಾರೆ.

RELATED ARTICLES

Related Articles

TRENDING ARTICLES