Sunday, May 19, 2024

ಪಿಟಿಸಿಎಲ್ ಕಾಯ್ದೆ ತಿದ್ದುಪಡಿ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲ : ಸಿದ್ದರಾಮಯ್ಯ

ಬೆಂಗಳೂರು : ಪಿಟಿಸಿಎಲ್ ಕಾಯ್ದೆ ತಿದ್ದುಪಡಿ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರೊಂದಿಗೆ ಸಭೆ ನಡೆಸಿ ಅವರು ಚರ್ಚಿಸಿದರು.

ನಾವು ಮೊದಲೇ ಕೊಟ್ಟಿದ್ದ ಭರವಸೆಯಂತೆ ನಮ್ಮ ಸರ್ಕಾರದ ಮೊದಲನೆ ಅಧಿವೇಶನದಲ್ಲೇ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ. ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಷಯದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಗಳ ಜತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.

ಇದನ್ನೂ ಓದಿ : ತಿಂಗಳಾಂತ್ಯದಲ್ಲಿ ಬೆಂಗಳೂರಿಗೆ ಹೊಸ ರೂಪ ಬರ್ತಿದೆ : ಡಿ.ಕೆ ಶಿವಕುಮಾರ್

ದಲಿತರ ಜಮೀನು ಹಕ್ಕು ಕಾಪಾಡುವ ನಿಟ್ಟಿನಲ್ಲಿ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಕುರಿತ ಸರ್ಕಾರದ ನಿಲುವನ್ನು ಬಜೆಟ್​ನಲ್ಲಿಯೂ ಸ್ಪಷ್ಟಪಡಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿಯೇ ಕಾಯ್ದೆ ತಿದ್ದುಪಡಿ ಮಾಡುವ ಉದ್ದೇಶದಿಂದ ಸಮುದಾಯದ ಮುಖಂಡರ ಅಭಿಪ್ರಾಯ ಪಡೆಯಲು ಸಭೆ ಕರೆಯಲಾಗಿದೆ ಎಂದು ತಿಳಿಸಿದರು.

ಕಾನೂನು ತಜ್ಞರ ಅಭಿಪ್ರಾಯ ಸಂಗ್ರಹ

ಮತ್ತೆ ಮತ್ತೆ ಯಾವುದೇ ವಿವಾದ ಇರಬಾರದು. ಪಿಟಿಸಿಎಲ್ ಕಾಯ್ದೆಯ ಉದ್ದೇಶ ಪರಿಣಾಮಕಾರಿಯಾಗಿ ಈಡೇರಬೇಕು. ಭೂಮಿ ಕಳೆದುಕೊಂಡವರಿಗೆ ನ್ಯಾಯಾಲಯದಲ್ಲಿ ಹಿನ್ನಡೆ ಆಗಬಾರದು ಎನ್ನುವ ಉದ್ದೇಶದಿಂದ ಈ ಬಗ್ಗೆ ದಲಿತ ಮುಖಂಡರ ಮತ್ತು ನ್ಯಾಯವಾದಿಗಳ ಅಭಿಪ್ರಾಯ ಕೇಳಿದ್ದೇನೆ. ಕಾನೂನು ತಜ್ಞರ ಅಭಿಪ್ರಾಯವನ್ನೂ ಪಡೆದುಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ, ಹೆಚ್.ಸಿ ಮಹದೇವಪ್ಪ, ಹೆಚ್.ಕೆ ಪಾಟೀಲ್, ಡಾ.ಜಿ ಪರಮೇಶ್ವರ, ಕೆ.ಹೆಚ್ ಮುನಿಯಪ್ಪ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ನಾಗೇಂದ್ರ, ಕೆ.ಎನ್ ರಾಜಣ್ಣ, ಆರ್.ಬಿ.ತಿಮ್ಮಾಪುರ ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES