Wednesday, January 22, 2025

ರೈತರ ಜೀವಕ್ಕಿಂತ ಕಾಂಗ್ರೆಸ್ಸಿಗರಿಗೆ ರಾಜಕೀಯವೇ ಮುಖ್ಯ : ಬೊಮ್ಮಾಯಿ ಕಿಡಿ

ಬೆಂಗಳೂರು : ರೈತರ ಜೀವಕ್ಕಿಂತ ಕಾಂಗ್ರೆಸ್ ಸರ್ಕಾರಕ್ಕೆ ರಾಜಕೀಯವೇ ಮುಖ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಬೊಮ್ಮಾಯಿ ಅವರು, ಮುಂಗಾರು ಮಳೆ ವೈಫಲ್ಯವಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಹಾಗೂ ಅವರ ಸಚಿವ ಸಂಪುಟ ವಿರೋಧ ಪಕ್ಷಗಳ ಸಭೆ ನಡೆಸುವುದರಲ್ಲಿ ಎಲ್ಲ ಸಮಯ ತೊಡಗಿಸಿದ್ದಾರೆ ಎಂದು ಕುಟುಕಿದ್ದಾರೆ.

ಮುಂಗಾರು ವಿಫಲವಾಗಿ ರೈತರು ಬಿತ್ತಿರುವ ಬೆಳೆ ಮೊಳಕೆಯೊಡೆಯದೇ ವಿಫಲವಾಗಿದೆ. ಹಲವಾರು ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ವರದಿಗಳು ಬರುತ್ತಿವೆ. ಅವರಿಗೆ ರೈತರ ಜೀವಕ್ಕಿಂತ ರಾಜಕೀಯವೇ ಮುಖ್ಯವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ : ರೈತರ ಸಮಾಧಿ ಮೇಲೆ ಕಾಂಗ್ರೆಸ್ ಮಹಾಘಟಬಂಧನ್ : ಹೆಚ್.ಡಿ ಕುಮಾರಸ್ವಾಮಿ ಕಿಡಿ

2013-18ರ ಘಟನೆ ಮರುಕಳಿಸುವಂತಿದೆ

ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳಲು ಮುಂದಾಗಿಲ್ಲ. ಅತಿ ಹೆಚ್ಚು ರೈತರ ಆತ್ಮಹತ್ಯೆಯಾಗಿರುವುದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ. ಇದನ್ನು ನೋಡಿದರೆ‌ ಈ ಹಿಂದೆ 2013ರಿಂದ 18ರ ಘಟನೆ ಮರುಕಳಿಸುವಂತೆ ಕಾಣಿಸುತ್ತಿದೆ ಎಂದು ಟೀಕಿಸಿದ್ದಾರೆ.

ಇದೊಂದು ರೈತ ವಿರೋಧಿ ಸರ್ಕಾರ. ನಾನು ಇದನ್ನು ಖಂಡಸುಸತ್ತೇನೆ. ಸರ್ಕಾರ ಕೂಡಲೇ ಎಲ್ಲ ಕ್ರಮ ಕೈಗೊಳ್ಳಲು ನಾನು ಆಗ್ರಹಿಸುತ್ತೇನೆ. ಎಂದು ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES