Wednesday, January 22, 2025

ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ, ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ : ಹೆಚ್​ಡಿಕೆ ಟ್ವೀಟ್​

ಬೆಂಗಳೂರು: ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ, ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ ಎಂದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ವೀಲಿಂಗ್​ ಮಾಡಿ ಜನರಿಗೆ ತೊಂದರೆ ನೀಡುತ್ತಿದ್ದವರ ಬಂಧನ!

ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ರಾಜ್ಯ ಕಾಂಗ್ರೆಸ್​ ಸರ್ಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ ಎಂದು ಪವರ್ ಟಿವಿ ಸುದ್ದಿಯನ್ನು ಟ್ವೀಟ್ ಮಾಡುವ ಮೂಲಕ ಆಡಳಿತ ಪಕ್ಷಕ್ಕೆ ಚಾಟಿ ಬೀಸಿದ್ದಾರೆ.

ಇದು ರಾಜ್ಯ ಸರಕಾರಿ ಕಾರ್ಯಕ್ರಮ ಅಲ್ಲ, ಹೊಸ ಸರಕಾರದ ಪ್ರಮಾಣ ಸ್ವೀಕಾರವೂ ಅಲ್ಲ. ಕೇವಲ ರಾಜಕೀಯ ಸಭೆಯಷ್ಟೇ. ಇಂಥ ಸಭೆಗೆ ಬಂದ ರಾಜಕೀಯ ನಾಯಕರಿಗೆ ಆಥಿತ್ಯ ನೀಡಲು ಜವಾಬ್ದಾರಿಯುತ ಅಧಿಕಾರಿಗಳನ್ನು ಕಳಿಸಿದ್ದು ಆರೂವರೆ ಕೋಟಿ ಕನ್ನಡಿಗರಿಗೆ ಎಸಗಿದ ಘೋರ ಅಪಚಾರ ಹಾಗೂ ರಾಜ್ಯದ ಪಾಲಿಗೆ ಮಹಾ ದುರಂತ.

ಯಾವುದೇ ಒಂದು ರಾಜ್ಯದ ಅಭಿವೃದ್ಧಿ, ಆಡಳಿತ, ಮುನ್ನಡೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಐಎಎಸ್ ಅಧಿಕಾರಿಗಳು ಕೇವಲ ಅಧಿಕಾರಿಗಳಷ್ಟೇ ಅಲ್ಲ, ಆಯಾ ರಾಜ್ಯಗಳ ಕ್ಷಮತೆ, ದಕ್ಷತೆಯ ಪ್ರತೀಕ. ಅಂಥವರನ್ನು ಇನ್ನೊಬ್ಬರ ಆಜ್ಞಾಪಾಲಕರನ್ನಾಗಿ ಮಾಡಿ, ಬಾಗಿಲು ಕಾಯುವ ಕೆಲಸ ಹಚ್ಚಿದ್ದು ಆಡಳಿತ ಪಕ್ಷದ ಅಹಂಕಾರದ ಪರಮಾವಧಿ ಎಂದು ಟೀಕಿಸಿ ಟ್ವೀಟ್ ಮಾಡಿದ್ದಾರೆ.

RELATED ARTICLES

Related Articles

TRENDING ARTICLES