ಬೆಂಗಳೂರು : ಬಿಜೆಪಿ ಸಂಸದ ಮತ್ತು ನಿರ್ಗಮಿತ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಕೋರ್ಟ್ 25,000 ರೂಪಾಯಿ ಬಾಂಡ್ ಮೇಲೆ 2 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಇದೇ ವೇಳೆ ಡಬ್ಲ್ಯುಎಫ್‌ಐನ ಅಮಾನತುಗೊಂಡಿರುವ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್‌ಗೂ ಮಧ್ಯಂತರ ಜಾಮೀನು ನೀಡಲಾಗಿದೆ. ನ್ಯಾಯಾಲಯವು ಗುರುವಾರ ಸಾಮಾನ್ಯ ಜಾಮೀನು ಅರ್ಜಿಯ ವಿಚಾರಣೆ ನಡೆಸಲಿದೆ.
ಇದನ್ನೂ ಓದಿ : ಮೋದಿ ಜೀ.. ನೊಂದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಕೊಡಿಸಿ : ಸಿದ್ದರಾಮಯ್ಯ
ಬ್ರಿಜ್ ಭೂಷಣ್ ರಕ್ಷಿಸುವ ಹುನ್ನಾರ
ಕುಸ್ತಿ ಪಟುಗಳ ಆರೋಪ ಭಾರತದ ದಿಗ್ಗಜ ಬಾಕ್ಸರ್ ಮೇರಿ ಕೋಮ್ ನೇತೃತ್ವದಲ್ಲಿ ಸರ್ಕಾರ ರಚಿಸಿದ ಆರು ಸದಸ್ಯರ ಸಮಿತಿಯು ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಆದರೆ ಅದನ್ನು ಸಾರ್ವಜನಿಕಗೊಳಿಸಲಾಗಿಲ್ಲ. ಇದರ ಬೆನ್ನಲ್ಲೇ ಕುಸ್ತಿಪಟುಗಳು ಇಂತಹ ಆರೋಪ ಮಾಡಿದ್ದಾರೆ.