Sunday, December 22, 2024

ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ.ಮಂಜುನಾಥ್​ ಅವಧಿ ವಿಸ್ತರಣೆ!

ಬೆಂಗಳೂರು : ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ಸೇವಾವಧಿಯನ್ನು ಮತ್ತೆ 6 ತಿಂಗಳು ವಿಸ್ತರಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಇಂದು ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ

2007ರಿಂದ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಸಿಎನ್ ಮಂಜುನಾಥ್ ಅವರ ಅಧಿಕಾರ ಅವಧಿ ಕಳೆದ ವರ್ಷವೇ ಮುಕ್ತಾಯವಾಗಿತ್ತು. ಆದರೆ ರೋಗಿಗಳು ಮತ್ತು ಸಿಬ್ಬಂದಿ ಒತ್ತಾಯದ ಮೇರೆಗೆ ಈ ಹಿಂದಿನ ಬಿಜೆಪಿ ಸರ್ಕಾರ ಡಾ.ಸಿ.ಎನ್​ ಮಂಜುನಾಥ್ ಅವರ ಸೇವಾವಧಿಯನ್ನು 1 ವರ್ಷ ವಿಸ್ತರಣೆ ಮಾಡಿತ್ತು ಮತ್ತು 2023 ಜುಲೈ ತಿಂಗಳಲ್ಲಿ ಡಾ.ಸಿ.ಎನ್​.ಮಂಜುನಾಥ್ ಅವರ ಅವಧಿ ಪೂರ್ಣಗೊಳ್ಳುವ ಹಿನ್ನೆಲೆ ಇತ್ತೀಚೆಗೆ ಮಂಜುನಾಥ್​ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಿದ್ದರು.

ಈ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಲಬುರಗಿ ಜಯದೇವ ಆಸ್ಪತ್ರೆಯ ಕೆಲಸ ಜವಾಬ್ದಾರಿ ಹಿನ್ನಲೆಯಲ್ಲಿ ಜನವರಿ ತಿಂಗಳವರೆಗೆ ಡಾ.ಸಿಎನ್ ಮಂಜುನಾಥ್ ಅವರನ್ನು ನಿರ್ದೇಶಕರಾಗಿ ಮುಂದುವರಿಸುವ ನಿರ್ಧಾರ ಕೈಗೊಂಡಿದ್ದಾರೆ.

RELATED ARTICLES

Related Articles

TRENDING ARTICLES