Sunday, November 3, 2024

ಕೇರಳ ಮಾಜಿ ಸಿಎಂ ಉಮ್ಮನ್​ ಚಾಂಡಿ ನಿಧನ!

ಬೆಂಗಳೂರು: ಕೇರಳದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕೇರಳ ಕಾಂಗ್ರೆಸ್ ನ ಹಿರಿಯ ನಾಯಕ ಉಮ್ಮನ್ ಚಾಂಡಿ (79) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. 

ಇದನ್ನೂ ಓದಿ: ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ.ಮಂಜುನಾಥ್​ ಅವಧಿ ವಿಸ್ತರಣೆ!

ಗಳೂರಿನ ಇಂದಿರಾ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಓಮನ್ ಚಾಂಡಿ  ಚಿಕಿತ್ಸೆ ಫಲಕಾರಿಯಾಗದೆ ದೈವಾಧೀನರಾಗಿದ್ದಾರೆ. ಕೇರಳ‌ ರಾಜ್ಯವನ್ನು ಮಾನವ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಉನ್ನತ ಸ್ಥಾನದಲ್ಲಿ  ಇರಿಸಲು ಕಾರಣರಾದ ಮುಖ್ಯಮಂತ್ರಿಗಳಲ್ಲಿ ಓಮನ್ ಚಾಂಡಿ ಕೂಡ ಒಬ್ಬರಾಗಿದ್ದರು.

ಎರಡು ಬಾರಿ ಕೇರಳ ರಾಜ್ಯದ ಮುಖ್ಯಮಂತ್ರಿಗಳಾಗಿ ಸಾಧನೆ ಮಾಡಿದವರಾಗಿದ್ದ ಇವರು 2004 ರಿಂದ 2006 ಮತ್ತು 2011 ರಿಂದ 2016 ರವರೆಗೆ ಕೇರಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ,  ರಾಜ್ಯಪಾಲರಾಗಿ, ಕೇರಳ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ನಿರಂತರವಾಗಿ ಸಂವಿಧಾನದ ಆಶಯಗಳ, ಮೌಲ್ಯಗಳ‌ ರಕ್ಷಣೆಗೆ ಶ್ರಮಿಸಿ ಹೋರಾಟ ರಾಜಕಾರಣದ ಪರಂಪರೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸುತ್ತಿದ್ದರು.

1970 ರಿಂದ ಕೇರಳ ರಾಜ್ಯ ವಿಧಾನಸಭೆಗೆ ನಿರಂತರವಾಗಿ ಆಯ್ಕೆಯಾಗುತ್ತಾ ಅತ್ಯಂತ ದೀರ್ಘಾವಧಿ ಶಾಸಕರಾಗಿ ಪುತ್ತುಪ್ಪಲ್ಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾ ಬಂದಿದ್ದರು.  ವಿಶ್ವಸಂಸ್ಥೆಯಿಂದ ಸಾರ್ವಜನಿಕ ಸೇವೆಗಾಗಿ ಪ್ರಶಸ್ತಿಯನ್ನು ಗಳಿಸಿದ ಏಕೈಕ ಭಾರತೀಯ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನೂ ಗಳಿಸಿದ್ದರು.

RELATED ARTICLES

Related Articles

TRENDING ARTICLES