Monday, December 23, 2024

ವಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ INDIA ಹೆಸರು : ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು : ವಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ INDIA ಎಂಬ ಹೆಸರನ್ನು ಇಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಮಹಾಘಟಬಂಧನ್ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದು ಅತ್ಯಂತ ಪ್ರಮುಖ ಸಭೆ ಆಗಿತ್ತು. ಪ್ರಜಾಪ್ರಭುತ್ವ ರಕ್ಷಣೆಗೆ ದೇಶದ ಜನರ ರಕ್ಷಣೆಗೆ ಅತ್ಯಗತ್ಯವಾಗಿತ್ತು. ಹೀಗಾಗಿ, ನಾವೆಲ್ಲ ಒಂದುಗೂಡಿ ಒಂದೇ ಧ್ವನಿಯಲ್ಲಿ ನಿರ್ಣಯ ಕೈಗೊಂಡಿದ್ದೇವೆ. ಒಕ್ಕೂಟಕ್ಕೆ INDIA (Indian National Developmental Inclusive Alliance) ಎಂದು ಹೆಸರಿಟ್ಟಿದ್ದೇವೆ ಎಂದರು.

ಭಾರತದ ಸಾರ್ವಭೌಮತ್ವ ಕಾಪಾಡುವ ನಿಟ್ಟಿನಲ್ಲಿ ಸಭೆ ಮಾಡಿದ್ದೇವೆ. ಈ ಸಭೆಯಲ್ಲಿ 26 ಪಕ್ಷಗಳ ನಾಯಕರು ಭಾಗಿಯಾಗಿದ್ದಾರೆ. ಮುಂದಿನ ಸಭೆ ಆಗಸ್ಟ್ 6ಕ್ಕೆ ಮುಂಬೈನಲ್ಲಿ ನಡೆಯಲಿದೆ. ಕ್ಯಾಂಪೇನ್ ಮ್ಯಾನೇಜ್ಮೆಂಟ್ ನಿರ್ಣಯಕ್ಕೆ ಉಪ ಸಮಿತಿ ರಚನೆ ಮಾಡಲಾಗುವುದು ಎಂದು ತಿಳಿಸಿದರು.

ಪ್ರಧಾನಿ ಹುದ್ದೆ ಬಗ್ಗೆ ಆಸಕ್ತಿ ಇಲ್ಲ

ಕಾಂಗ್ರೆಸ್​​ ಅಧಿಕಾರದ ಆಸೆಯಿಂದ ಒಕ್ಕೂಟ ವ್ಯವಸ್ಥೆಗೆ ಕೈಜೋಡಿಸಿಲ್ಲ. ಕಾಂಗ್ರೆಸ್​ ಅಧಿಕಾರ ಬರಬೇಕು ಅಥವಾ ಪ್ರಧಾನಿ ಹುದ್ದೆ ಬಗ್ಗೆ ಆಸಕ್ತಿ ಇಲ್ಲ. ಸಾಮಾಜಿಕ ನ್ಯಾಯ ಮತ್ತು ಸಂವಿಧಾನ ರಕ್ಷಣೆಯೇ ನಮ್ಮ ಉದ್ದೇಶ. ನಮ್ಮ ಪ್ರಮುಖ ಉದ್ದೇಶ ನಮಗಾಗಿ ಅಧಿಕಾರ ಗಳಿಸುವುದಲ್ಲ ಎಂದು ಹೇಳಿದರು.

I – Indian
N – National
D – Developmental
I – Inclusive
A – Alliance

RELATED ARTICLES

Related Articles

TRENDING ARTICLES