ಬೆಂಗಳೂರು : ನಮ್ಮ ಯುದ್ಧದಲ್ಲಿ ಇಂಡಿಯಾ(INDIA)(BJP) ಗೆಲ್ಲಲಿದೆ, ಬಿಜೆಪಿ ಸೋಲಲಿದೆ ಎಂದು ಕೇಂದ್ರ ಬಿಜೆಪಿ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುಡುಗಿದರು.
ಮಹಾಘಟಬಂಧನ್ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮೈತ್ರಿಗೆ ಒಪ್ಪಿ ಬಂದಿರುವ ಎಲ್ಲಾ ಪಕ್ಷಗಳಿಗೆ ಧನ್ಯವಾದಗಳು. ನಮ್ಮ ಮುಂದಿನ ಸಭೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆಯಲಿದೆ ಎಂದರು.
ಬಿಜೆಪಿ ದೇಶವನ್ನು ಮಾರುವುದರಲ್ಲಿ, ಲೋಕತಂತ್ರ ಖರೀದಿಸುವಲ್ಲಿ ಮಗ್ನವಾಗಿದೆ. ಇದೇ ಕಾರಣಕ್ಕೆ ಯಾವುದೇ ಸಂಸ್ಥೆಗಳು ಸ್ವತಂತ್ರ್ಯವಾಗಿ ಕೆಲಸ ಮಾಡಲು ಬಿಡುತ್ತಿಲ್ಲ. ಯಾವುದೇ ವಿರೋಧ ಪಕ್ಷಗಳ ನಾಯಕರು ಧ್ವನಿ ಎತ್ತಿದರೆ ಅವರ ವಿರುದ್ಧ ಐಟಿ, ಇಡಿ ದಾಳಿ ಮಾಡಲಾಗುತ್ತಿದೆ ಎಂದು ಕುಟುಕಿದರು.
ಇದನ್ನೂ ಓದಿ : ಇವ್ರು ಮಾಡ್ತಿರೋದು ರಾಜಕೀಯವೋ? ರಾಜ್ಯದ ಅಭಿವೃದ್ಧಿಯೋ? : ಕುಮಾರಸ್ವಾಮಿ ಕಿಡಿ
ಇದು ನಮಗೆ ನಿಜವಾದ ಸವಾಲಾಗಿದೆ
ಇದು ನಮಗೆ ನಿಜವಾದ ಸವಾಲಾಗಿದೆ. INDIA ಒಕ್ಕೂಟಕ್ಕೆ ಭಾರೀ ಬೆಂಬಲವಿದೆ. ನಾವು ನಮ್ಮ ಗುರಿಯನ್ನು ತಲುಪೇ ತೀರುತ್ತೇವೆ. ನಾವು ದೇಶಕ್ಕಾಗಿ ಶ್ರಮ ವಹಿಸುತ್ತಿದ್ದೇವೆ. ಎಲ್ಲವೂ ಪ್ರಜಾಪ್ರಭುತ್ವದ ರಕ್ಷಣೆಗಾಗಿ, ಭ್ರಷ್ಟಾಚಾರದಿಂದ ದೇಶವನ್ನು ಪಾರು ಮಾಡಬೇಕಿದೆ. ಮೊದಲು ಯುಪಿಎ ಹೆಸರಿನಲ್ಲಿ ಇತ್ತು. ಈಗ ಹೊಸ ಹೆಸರಿನಿಂದ ಕರೆಯಲ್ಪಡಲಿದೆ. ಎನ್ಡಿಎ ಈ ಹಿಂದೆ ಇತ್ತು, ಆದರೆ ಇಷ್ಟು ದಿನ ಅಸ್ತಿತ್ವದಲ್ಲಿ ಇರಲಿಲ್ಲ ಎಂದರು.
ಇಂಡಿಯಾ ಸವಾಲು ಎದುರಿಸಲು ಸಾಧ್ಯವೇ?
ದಲಿತರು, ಅಲ್ಪಸಂಖ್ಯಾತರು, ಹಿಂದೂ, ಮುಸಲ್ಮಾನ, ಸಿಖ್ ಸಮುದಾಯಗಳಿಗೆ ಎಲ್ಲ ಕಡೆ ಅಪಾಯವಿದೆ. ಈ ಸರ್ಕಾರದ ಕೆಲಸ, ಕೆಡವುದು ಹಾಗೂ ಮಾರಾಟ ಮಾಡುವುದು. ಹೀಗಾಗಿ, ಇಂದು ನಾವೆಲ್ಲರೂ ಸೇರಿ ‘ಇಂಡಿಯಾ’ ಎಂಬ ಮೈತ್ರಿಕೂಟವನ್ನು ಸ್ಥಾಪಿಸಿದ್ದೇವೆ. ಬಿಜೆಪಿ ಹಾಗೂ ಎನ್ ಡಿಎ ಇಂಡಿಯಾ ಸವಾಲನ್ನು ಎದುರಿಸಲು ಸಾಧ್ಯವೇ? ಎಂದು ಪ್ರಶ್ನಿಸಿದರು.