Monday, December 23, 2024

ಯಡಿಯೂರಪ್ಪನ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಸಿಟಿ ರವಿ

ಬೆಂಗಳೂರು: ರಾಜ್ಯ ವಿಧಾನ ಸಭೆ ಸೋಲಿನ ನಂತರ ಇದೇ ಮೊದಲ ಬಾರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಆಶೀರ್ವಾದ ಪಡೆದುಕೊಂಡಿದ್ದಾರೆ. 

ವಿಪಕ್ಷ ಆಯ್ಕೆಯ ಕಗ್ಗಂಟಿನ ನಡುವೆಯೇ ಯೂಡಿಯೂರಪ್ಪ ಅವರನ್ನು ಭೇಟಿ ಮಾಡಿ ಕಾಲಿಗೆ ಬಿದ್ದು ನಮಸ್ಕರಿಸಿರುವುದು ರಾಜ್ಯ ರಾಜಕರಣದಲ್ಲಿ ಸಂಚಲನ ಮೂಡಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ : ಆರ್​.ಅಶೋಕ್

ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಖಾಸಗಿ ನಿವಾಸದಲ್ಲಿ ಭೇಟಿ ಮಾಡಿ ಕೆಲ ಸಮಯ ಮಹತ್ವದ ಚರ್ಚೆಯನ್ನೂ ಕೂಡ ನಡೆಸಿದರು.

ಇನ್ನೂ ಬಿಜೆಪಿ ರಾಜ್ಯಧ್ಯಕ್ಷರ ಬದಲಾವಣೆ ಮಾಡಲು ಬಿಜೆಪಿ ಹೈಕಮಾಂಡ್ ಮುಂದಾಗಿದ್ದು, ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಪಟ್ಟಿಯಲ್ಲಿ ಸಿಟಿ ರವಿ ಹೆಸರು ಇರುವ ಸಾಧ್ಯತೆ ಇದೆ.

ಬಿಜೆಪಿಯಲ್ಲಿ ಬಹಿರಂಗ ಕಲಹಗಳು ಹೆಚ್ಚಾಗಿರುವ ನಡುವೆಯೇ ಸಿಟಿ ರವಿ ಅವರು ದಿಢೀರ್ ಬಿಎಸ್​ವೈ ಭೇಟಿ ಮಾಡಿದ್ದು ಭಾರೀ ಕುತೂಹಲಕ್ಕೆ ಕಾರಣವಾಗಿದೆ

 

 

 

 

 

 

 

RELATED ARTICLES

Related Articles

TRENDING ARTICLES