ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿಯಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಸಿಎಂ ಸಿದ್ದರಾಮಯ್ಯ,ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಧಿಕೃತ ಚಾಲನೆ ನೀಡಿದ್ದಾರೆ.
ಹೌದು, ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ನ 4 ನೇ ಗ್ಯಾರಂಟಿಯಾದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಿದ್ದು,ಈಗಾಗಲೇ ಈ ಯೋಜನೆ ಜಾರಿಗೆ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಿಂದ ಸಿದ್ಧತೆ ಮಾಡಿಕೊಂಡಿದೆ.
ಇದನ್ನೂ ಓದಿ: ‘ಗೃಹಲಕ್ಷ್ಮೀ ನಕಲಿ’ ನೋಂದಣಿ ಪತ್ರ ಮಾರಾಟ
ಇನ್ನು ಈ ಯೋಜನೆಯನ್ನು ಪ್ರತಿ ಮನೆಯ ಯಜಮಾನಿಗೆ ತಲುಪಿಸಲಿಸಲು ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗೆ ತಳ ಹಂತದಿಂದ ತರಬೇತಿ ನೀಡಲಾಗಿದೆ.
ನಾಡಕಚೇರಿ, ಗ್ರಾಮ ಒನ್, ಬೆಂಗಳೂರು ಒನ್ ಸಿಬ್ಬಂದಿಗೂ ತರಬೇತಿ ನೀಡಿದ್ದು, ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ. ಪಡೆಯಲು, ಮನೆ ಯಜಮಾನಿಯ ಪತಿಯ ಆಧಾರ್ಕಾರ್ಡ್ ಕೂಡ ಬೇಕಾಗುತ್ತದೆ.
ಯೋಜನೆಯ ಉಚಿತ ಲಾಭ ಪಡೆದುಕೊಳ್ಳಲು ಸಹಾಯವಾಣಿ ಸಂಖ್ಯೆ. 8147500500ಕ್ಕೆ ಪಡಿತರ ಚೀಟಿ ಸಂಖ್ಯೆ SMS ಮಾಡಿ, ಕೂಡಲೇ ಇದು ಸ್ಥಳ, ಗೊತ್ತುಪಡಿಸಿದ ದಿನಾಂಕ, ಸಮಯ ಸಂದೇಶ ರವಾನಿಸುತ್ತದೆ. ಗೊಂದಲವಿದ್ದರೆ 1902 ನಂಬರ್ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಿ ಎಂದು ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.