Friday, January 10, 2025

ಬೆಂಬಲ ಬೆಲೆಗೆ ಆಗ್ರಹಿಸಿ ತೆಂಗು ಬೆಳೆಗಾರರಿಂದ ಬೃಹತ್​ ಪ್ರತಿಭಟನೆ

ಬೆಂಗಳೂರು: ಬೆಂಬಲ ಬೆಲೆ ನೀಡುವಂತೆ ಫ್ರೀಡಂ ಪಾರ್ಕ್​ನಲ್ಲಿ ತೆಂಗು ಬೆಳೆಗಾರರು ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ.

ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ 16,730 ರೂ. ಬೆಂಬಲ ಬೆಲೆ ನೀಡುವಂತೆ ಹಾಗೂ ಬೆಂಬಲ ಬೆಲೆಯಡಿ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಇಂದು ಫ್ರೀಡಂ ಪಾರ್ಕ್‌ನಲ್ಲಿ ತೆಂಗು ಬೆಳೆಗಾರರಿಂದ “ವಿಧಾನಸೌಧ ಚಲೋ’ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ತೆಂಗು ಮತ್ತು ಕೊಬ್ಬರಿಯನ್ನು ಎಪಿಎಂಸಿ ಮಾರುಕಟ್ಟೆಯ ಮೂಲಕವೇ ಖರೀದಿಸಬೇಕು. ರಾಜ್ಯದಲ್ಲಿ 6.46 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ತೆಂಗು ಬೆಳೆ ಬೆಳೆಯಲಾಗುತ್ತದೆ. ವಾರ್ಷಿಕ 2.18 ಲಕ್ಷ ಮೆಟ್ರಿಕ್‌ ಟನ್‌ ಕೊಬ್ಬರಿ  ಉತ್ಪಾದನೆಯಾಗುತ್ತದೆ.

ಇದನ್ನೂ ಓದಿ: 60 ವರ್ಷ ದೇಶವನ್ನು ಲೂಟಿ ಮಾಡಿದವ್ರು ಒಂದಾಗಿದ್ದಾರೆ : ಶೋಭಾ ಕರಂದ್ಲಾಜೆ

ಇನ್ನೂ ಈ ಹಿಂದೆ ಪ್ರತಿ ಕ್ವಿಂಟಲ್‌ ಕೊಬ್ಬರಿ 16 ಸಾವಿರದಿಂದ 18 ಸಾವಿರದವರೆಗೂ ಮಾರಾಟವಾಗುತ್ತಿತ್ತು. ಕೇಂದ್ರ ಸರ್ಕಾರದ ತಪ್ಪು ಆಮದು ನೀತಿ ಮತ್ತು ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಸದ್ಯ ಪ್ರತಿ ಕ್ವಿಂಟಲ್‌ ಕೊಬ್ಬರಿಗೆ ಕೇವಲ 6 ಸಾವಿರದಿಂದ 7 ಸಾವಿರದವರೆಗೂ ಮಾರಾಟವಾಗುತ್ತಿದೆ.

ಹೀಗಾಗಿ ರಾಜ್ಯದ ಎಲ್ಲಾ ಕೊಬ್ಬರಿ ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ.

 

 

RELATED ARTICLES

Related Articles

TRENDING ARTICLES