Monday, December 23, 2024

ಕೈಕೊಟ್ಟ ಮಳೆ, ಮನನೊಂದು ರೈತ ನೇಣಿಗೆ ಶರಣು

ಹುಬ್ಬಳ್ಳಿ : ರೈತನೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿ ಜಿಲ್ಲೆಯ ನವಲಗುಂದ ತಾಲ್ಲೂಕಿನ ಕುಮಾರಗೋಪ್ಪ ಗ್ರಾಮದಲ್ಲಿ ನಡೆದಿದೆ.

ಶಿವಯೋಗಿ ಚನ್ನಯ್ಯ ಖಾತೇದಾರ (47) ಆತ್ಮಹತ್ಯೆ ಮಾಡಿಕೊಂಡ ರೈತ. ಮೃತ ರೈತ ಕೃಷಿಗಾಗಿ ಪತ್ನಿಯ ಹೆಸರಿನಲ್ಲಿ ಖಾಸಗಿ ಫೈನಾನ್ಸ್‌ನಲ್ಲಿ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು.

ತಂದೆಯ ಹೆಸರಿನಲ್ಲಿರುವ 2 ಎಕರೆ ಹಾಗೂ ಬೇರೆಯವರ ಹೊಲವನ್ನು ಲಾವಣಿ ರೂಪದಲ್ಲಿ ಪಡೆದು ಕೃಷಿ ಮಾಡುತ್ತಿದ್ದರು. ಈ ವರ್ಷ ಮುಂಗಾರು ಮಳೆ ಕೈಕೊಟ್ಟಿದ್ದು, ಹೊಲದಲ್ಲಿ ಬಿತ್ತನೆ ಮಾಡಿದ ಹೆಸರಿನ ಬೆಳೆ ಹಾಳಾಗಿದೆ. ಹೀಗಾಗಿ, ಮನನೊಂದು ಮನೆಯಲ್ಲಿ ನೇಣು ಹಾಕಿಕೊಂಡ ಸಾವಿಗೆ ಶರಣಾಗಿದ್ದಾರೆ.

ಘಟನೆ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ನವಲಗುಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನವಲಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES