Sunday, December 22, 2024

ಇಂದು ಗೃಹಲಕ್ಷ್ಮೀ ಯೋಜನೆಗೆ ಅಧಿಕೃತ ಚಾಲನೆ

ಬೆಂಗಳೂರು: ಕಾಂಗ್ರೆಸ್​ ಗ್ಯಾರಂಟಿಯಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಇಂದಿನಿಂದ ಅಧಿಕೃತ ಚಾಲನೆ ಸಿಗಲಿದೆ. 

ಹೌದು, ಇಂದು ಸಂಜೆ 5ಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್​ನ 4 ನೇ ಗ್ಯಾರಂಟಿಯಾದ​ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಿದ್ದು,ಈಗಾಗಲೇ ಯೋಜನೆ ಜಾರಿಗೆ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ‘ಗೃಹಲಕ್ಷ್ಮೀ ನಕಲಿ’ ನೋಂದಣಿ ಪತ್ರ ಮಾರಾಟ

ಇನ್ನು ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗೆ ತಳ ಹಂತದಿಂದ ತರಬೇತಿ ನೀಡಲಾಗಿದೆ. ನಾಡಕಚೇರಿ, ಗ್ರಾಮ ಒನ್, ಬೆಂಗಳೂರು ಒನ್ ಸಿಬ್ಬಂದಿಗೂ ತರಬೇತಿ ನೀಡಿದ್ದು, ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ. ಪಡೆಯಲು, ಮನೆ ಯಜಮಾನಿಯ ಪತಿಯ ಆಧಾರ್​​ಕಾರ್ಡ್ ಕೂಡ ಬೇಕಾಗುತ್ತದೆ.

ಯೋಜನೆಯ ಉಚಿತ ಲಾಭ ಪಡೆದುಕೊಳ್ಳಲು ಸಹಾಯವಾಣಿ ಸಂಖ್ಯೆ. 8147500500ಕ್ಕೆ ಪಡಿತರ ಚೀಟಿ ಸಂಖ್ಯೆ SMS ಮಾಡಿ, ಕೂಡಲೇ ಇದು ಸ್ಥಳ, ಗೊತ್ತುಪಡಿಸಿದ ದಿನಾಂಕ, ಸಮಯ ಸಂದೇಶ ರವಾನಿಸುತ್ತದೆ. ಗೊಂದಲವಿದ್ದರೆ 1902 ನಂಬರ್​ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಿ ಎಂದು ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಮಾಹಿತಿ ನೀಡಿದ್ದಾರೆ.

 

 

RELATED ARTICLES

Related Articles

TRENDING ARTICLES