Monday, December 23, 2024

ಶೇ.0 ಬಡ್ಡಿದರದಲ್ಲಿ 5 ಲಕ್ಷ ಕೃಷಿ ಸಾಲ : ಚಲುವರಾಯಸ್ವಾಮಿ

ಶಿವಮೊಗ್ಗ : ಶೇ.0 ಬಡ್ಡಿದರದಲ್ಲಿ ನೀಡಲಾಗುತ್ತಿದ್ದ ಕೃಷಿ ಸಾಲವನ್ನು 3 ಲಕ್ಷಗಳ ಮಿತಿಯಿಂದ 5 ಲಕ್ಷಕ್ಕೆ ಏರಿಸುವ ಬಗ್ಗೆ ಚಿಂತನೆ ಇದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. 

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅನುಷ್ಠಾನದಲ್ಲಿರುವ ಕೃಷಿ ಇಲಾಖೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದ್ದಾರೆ.

ಮುಂದಿನ 15 ದಿನಗಳೊಳಗಾಗಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳ್ಳುವ ವಿವಿಧ ಯೋಜನೆಗಳ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗುವುದು. ಆಡಳಿತಾರೂಢ ಸರ್ಕಾರವು ರೈತರಿಗೆ ಪೂರಕವಾಗಿದೆ. ಈವರೆಗೆ ರಾಜ್ಯದ ಕೃಷಿಕರಿಗೆ ಶೇ. 0 ಬಡ್ಡಿದರದಲ್ಲಿ 3 ಲಕ್ಷದ ವರೆಗೆ ಕೃಷಿ ಸಾಲ ನೀಡಲಾಗುತ್ತಿತ್ತು. ಅದನ್ನು 5 ಲಕ್ಷಕ್ಕೆ ಏರಿಸುವ ಬಗ್ಗೆ ಚಿಂತನೆ ನಡೆಸಿದ್ದು, ಶೀಘ್ರದಲ್ಲಿ ಯೋಜನೆಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಇದನ್ನೂ ಓದಿ : ನಂದಿನಿ ಹಾಲಿನ ದರ 3 ರೂ. ಏರಿಕೆ

ಕೃಷಿಕರ ಸಮಸ್ಯೆಗಳಿಗೆ ಕಿವಿಯಾಗಬೇಕು

ಅರ್ಹರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಲು ಸೂಕ್ತ ಸಲಹೆ, ಸಹಕಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕರಿಂದ ಯಾವುದೇ ದೂರುಗಳು ಬಾರದಂತೆ ಅಧಿಕಾರಿಗಳು ತಮ್ಮ ಜವಾಬ್ದಾರಿಯರಿತು ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದ್ದಾರೆ.

ಮುಂಗಾರು ಮಳೆಯಲ್ಲಿ ಕೊರತೆ ಕಂಡುಬಂದಿದೆ. ಪ್ರಸ್ತುತ ಹಿಂಗಾರು ಹಂಗಾಮಿನಲ್ಲಿ ಮಳೆ ಆಶಾದಾಯಕವಾಗಿದೆ. ಕೃಷಿ ಅಧಿಕಾರಿಗಳು ಕಾಲಕಾಲಕ್ಕೆ ಕೃಷಿ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಬೇಕು. ಅಲ್ಲದೇ ಗ್ರಾಮೀಣ ಕ್ಷೇತ್ರ ಭೇಟಿಗೆ ತೆರಳಿದಾಗ ಅಲ್ಲಿನ ಕೃಷಿಕರ ಸಮಸ್ಯೆಗಳಿಗೆ ಕಿವಿಯಾಗಬೇಕು. ಅದಕ್ಕೆ ಪೂರಕವಾಗಿ ಸೂಕ್ತ ಹಾಗೂ ಸಕಾಲಿಕ ಮಾರ್ಗದರ್ಶನ ನೀಡಿ, ಸಮಸ್ಯೆಗಳ ಪರಿಹಾರಕ್ಕೆ ಕ್ರಮವಹಿಸಬೇಕು ಎಂದು ತಾಕೀತು ಮಾಡಿದ್ದಾರೆ.

RELATED ARTICLES

Related Articles

TRENDING ARTICLES