ಬೆಂಗಳೂರು : ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಕೋಲ್ಕತ್ತಾದ ಹರೀಶ್ ಚಟರ್ಜಿ ಸ್ಟ್ರೀಟ್‌ನಲ್ಲಿರುವ ನಿವಾಸಕ್ಕೆ ಬಂದೂಕು ಹಿಡಿದು ನುಗ್ಗಲು ಯತ್ನಿಸಿದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಮಮತಾ ಬ್ಯಾನರ್ಜಿಯವರ ಮನೆಗೆ ಅಪರಿಚಿತ ವ್ಯಕ್ತಿಯೊಬ್ಬ ಪ್ರವೇಶಿಸಲು ಪ್ರಯತ್ನಿಸಿದ್ದ. ಈ ವ್ಯಕ್ತಿಯು ಬಂದೂಕು ಮತ್ತು ಚಾಕು ಹಿಡಿದುಕೊಂಡು ಮನೆಗೆ ನುಗ್ಗಲು ಯತ್ನಿಸುತ್ತಿದ್ದಾಗ ಪೊಲೀಸರು ಆತನನ್ನು ತಡೆದು, ಬಂಧನಕ್ಕೊಳಪಡಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಶೇಖ್ ನೂರ್ ಎಂದು ಗುರುತಿಸಲಾಗಿದೆ. ವ್ಯಕ್ತಿ ಪೊಲೀಸರಂತೆ ನಟಿಸಿ ಕಪ್ಪು ಕಾರಿನಲ್ಲಿ ಬಂದಿದ್ದು, ಮಮತಾ ನಿವಾಸದ ಬಳಿಯ ಲೇನ್‌ಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ. ಈತ ವಿವಿಧ ಭದ್ರತಾ ಏಜೆನ್ಸಿಗಳಿಗೆ ಸೇರಿದ ಹಲವಾರು ನಕಲಿ ಗುರುತಿನ ಚೀಟಿಗಳನ್ನು ಕೂಡ ಹೊಂದಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬೇಟಿ ಜಲಾವೋ ಆಗಿದೆ
ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತು ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣಗಳ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿಯ ‘ಬೇಟಿ ಬಚಾವೋ’ ಘೋಷಣೆ ಈಗ ‘ಬೇಟಿ ಜಲಾವೋ’ ಆಗಿ ಬದಲಾಗಿದೆ ಎಂದು ಹೇಳಿದ್ದಾರೆ.
ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬ್ರಿಜ್ ಭೂಷಣ್ ಸಿಂಗ್ಗೂ ಜಾಮೀನು ಮಂಜೂರಾಗಿದೆ. ಮುಂಬರುವ ಚುನಾವಣೆಯಲ್ಲಿ ದೇಶದ ಮಹಿಳೆಯರು ನಿಮ್ಮನ್ನು ದೇಶದ ರಾಜಕೀಯದಿಂದ ಹೊರಹಾಕಲಿದ್ದಾರೆ. ಬಿಜೆಪಿಯ ‘ಬೇಟಿ ಬಚಾವೋ’ ಈಗ ‘ಬೇಟಿ ಜಲಾವೋ’ ಆಗಿ ಬದಲಾಗಿದೆ ಎಂದು ತಿಳಿಸಿದ್ದಾರೆ.