Monday, December 23, 2024

ಅಕ್ರಮವಾಗಿ ಶ್ರೀಗಂಧ ಮರಗಳನ್ನು ಸಾಗಿಸುತ್ತಿದ್ದ ಆರೋಪಿಗಳ ಬಂಧನ!

ಬೀದರ್ : ಅಕ್ರಮವಾಗಿ ಶ್ರೀಗಂಧದ ಮರಗಳನ್ನು ಸಾಗಿಸುತ್ತಿದ್ದ ಆರೋಪಿಗಳನ್ನು ಹುಮನಾಬಾದ ವ್ಯಾಪ್ತಿಯ ವಲಯ ಅರಣ್ಯಾಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಾಲೂಕಿನ ಗಡವಂತಿ ಗ್ರಾಮದ ಸರ್ವೆ ನಂಬರ್ 47 ರಲ್ಲಿ ಘಟನೆ ನಡೆದಿದ್ದು. ಬಂಧಿತರಿಂದ ಶ್ರೀಗಂಧದ ಮರದ ತುಂಡುಗಳನ್ನು ಸಾಗಿಸಲು ತಂದಿದ್ದ ಎರಡು ಬೈಕ್ ಹಾಗೂ 9 ಮೊಬೈಲ್ ಗಳನ್ನು ಬೀದರ್ ಜಿಲ್ಲೆಯ ಹುಮನಾಬಾದ ವಲಯ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಇದನ್ನು ಓದಿ : ತಂದೆ ಮೇಲಿನ ದ್ವೇಷಕ್ಕೆ ಮಕ್ಕಳ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನ!

ಐದು ಶ್ರಿಗಂಧದ ಮರ ಕಡಿದು ತುಂಡು ಮಾಡಿ ಸಾಗಿಸುತ್ತಿದ್ದ ಖಚಿತ ಮಾಹಿತಿ ಆಧಾರದ ಮೇಲೆ ಅರಣ್ಯಾಧಿಕಾರಿಗಳು ಕಾರ್ಯಚರಣೆಯನ್ನು ನೆಡೆಸಿ 8 ಮಂದಿ ಆರೋಪಿಗಳನ್ನು ಬಂಧನ ಮಾಡಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

RELATED ARTICLES

Related Articles

TRENDING ARTICLES