Monday, December 23, 2024

ನಂದಿನಿ ಹಾಲಿನ ದರ 3 ರೂ. ಏರಿಕೆ

ಬೆಂಗಳೂರು : ಫ್ರೀ ಯೋಜನೆಯ ಉಡುಗೊರೆಯ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರ, ರಾಜ್ಯದ ಜನರಿಗೆ ಬಿಗ್ ಶಾಕ್ ನೀಡಿದೆ. ಗ್ರಾಹಕರ ಜೇಬಿಗೆ ಸೈಲೆಂಟ್ ಆಗಿಯೇ ಕತ್ತರಿ ಹಾಕಿದೆ.

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಲಾಗಿದೆ. ಆಗಸ್ಟ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದ್ದು, 5 ರೂಪಾಯಿ ಹೆಚ್ಚಿಸುವಂತೆ ಕೆಎಂಎಫ್ ಒಕ್ಕೂಟಗಳು ಸರ್ಕಾರಕ್ಕೆ ಮನವಿ ಮಾಡಿದ್ದವು.

ಕೆಎಂಫ್ ಅಧ್ಯಕ್ಷ ಭೀಮಾನಾಯ್ಕ್ ಮಾತನಾಡಿ, ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಆಗಸ್ಟ್ 1 ರಿಂದ ಪ್ರತಿ ಲೀಟರ್ ಗೆ 3 ರೂ. ದರ ಏರಿಕೆ ಮಾಡಲು ನಿರ್ಧಾರ ಮಾಡಿದ್ದಾರೆ. ರೈತರು, ಒಕ್ಕೂಟದ ಬೇಡಿಕೆ 5 ರೂ. ಇತ್ತು. 3 ಏರಿಕೆಗೆ ಅಸ್ತು ನೀಡಲಾಗಿದೆ. ಎಲ್ಲಾ ಮಾದರಿಯ ಹಾಲಿಗೂ 3 ರೂ. ದರ ಹೆಚ್ಚಳ ಮಾಡಲಾಗಿದೆ. ಹಾಲಿನ ಪುಡಿ ದರ ಏರಿಕೆಗೂ ಪ್ರಸ್ತಾವನೆ ಇಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮಾಜಿ ಸಚಿವ ಹೆಚ್.ಡಿ ರೇವಣ್ಣ ಮಾತನಾಡಿ, ಹಾಲಿನ ದರ 5 ರೂ. ಏರಿಕೆಗೆ ಬೇಡಿಕೆ ಇಟ್ಟಿದ್ವಿ. ಸಿಎಂ ಸಿದ್ದರಾಮಯ್ಯ 3 ರೂ. ಏರಿಕೆಗೆ ಒಪ್ಪಿದ್ದಾರೆ. 3 ರೂ. ರೈತರಿಗೆ ಹೋಗ್ಬೇಕು. ದರ ಏರಿಕೆ ಹಣ ರೈತರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತದೆ ಅಂತ ಹೇಳಿದ್ದಾರೆ ಎಂದಿದ್ದಾರೆ.

RELATED ARTICLES

Related Articles

TRENDING ARTICLES