ಬೆಂಗಳೂರು : ಸಚಿವಸ್ಥಾನ ಸಿಗದಿದ್ದಕ್ಕೆ ಬಿ.ಕೆ ಹರಿಪ್ರಸಾದ್ ಅಸಮಧಾನ ವಿಚಾರ ಕುರಿತು ಕರದಾಳದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಶಕ್ತಿ ಪೀಠದ ಡಾ. ಪ್ರಣವಾನಂದ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾರ್ಧನ ಪೂಜಾರಿ, ಹೆಚ್.ಜಿ ರಾಮುಲು, ಜಾಲಪ್ಪರನ್ನ ಮುಗಿಸಿದರು. ಈಗ ಹರಿಪಸ್ರಾದ್ ಧ್ವನಿ ಕುಗ್ಗಿಸುವ ಕೆಲಸ ಮಾಡುತ್ತಿದೆ ಎಂದು ಬೇಸರಿಸಿದ್ದಾರೆ.
ಬಿ.ಕೆ ಹರಿಪಸ್ರಾದ್ ಯಾವುದೇ ಜಾತಿ ರಾಜಕಾರಣ ಮಾಡಿಲ್ಲ. ರಾಜ್ಯದಲ್ಲಿ ಸರ್ಕಾರ ಬರಲು ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಹಾಗೂ ಬಿ.ಕೆ ಹರಿಪಸ್ರಾದ್ ಪ್ರಮುಖರು. ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕರಾಗಿದ್ದರು. ಆದರೆ, ಹರಿಪಸ್ರಾದ್ ಅವರಿಗೆ ಸಚಿವ ಸ್ಥಾನ ನೀಡಬೇಕಿತ್ತು ಎಂದು ಅಸಮಾಧಾನ ಹೊರಹಾಕಿದ್ದಾರೆ.
ಈ ವಿಷಯವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರ ಗಮನಕ್ಕೆ ತಂದಿದ್ದೇನೆ. ಅವರು ಬೇರೆ ಪಕ್ಷದಿಂದ ಹಾರಿ ಬಂದವರಲ್ಲ. ಕಾಂಗ್ರೆಸ್ ಪಕ್ಷದಲ್ಲೇ ಹಲವು ದಶಕಗಳಿಂದ ಕೆಲಸ ಮಾಡುತ್ತಿರುವವರು ಎಂದು ಬಿ.ಕೆ ಹರಿಪ್ರಸಾದ್ ಪರ ಬ್ಯಾಟ್ ಬೀಸಿದ್ದಾರೆ.
ಹರಿಪ್ರಸಾದ್ ಹೇಳಿದ್ದೇನು?
ಕರ್ನಾಟಕದಲ್ಲಿ ರಾಜಕೀಯವಾಗಿ ಈಡಿಗ ಸಮುದಾಯದವರು ಮುಂದೆ ಬರುತ್ತಿಲ್ಲ. ಏನೇ ಪ್ರಯತ್ನ ಮಾಡಿದ್ರು ಆಗುತ್ತಿಲ್ಲ. ಅವಕಾಶ ವಂಚಿರಾಗುತ್ತಿರುವುದು ನೋಡಿದರೆ ಯಾರದ್ದೊ ಷಡ್ಯಂತ್ರಕ್ಕೆ ಬಲಿಯಾಗುತ್ತಿದ್ದೇವೆ ಅನ್ನಿಸುತ್ತದೆ. ಸಿಎಂ, ಮಂತ್ರಿಗಳಾಗಲಿ ಯಾರ ಬಳಿಯೂ ಕೈ ಚಾಚುವುದಿಲ್ಲ. ಹಿಂದುಳಿದ ವರ್ಗಕ್ಕೆ ಯಾವ ರೀತಿ ಅನುಕೂಲ ಮಾಡಬೇಕೆಂದು ಯೋಚಿಸುತ್ತೇವೆ ಎಂದು ಬಿ.ಕೆ ಹರಿಪ್ರಸಾದ್ ಅಸಮಾಧಾನ ಹೊರಹಾಕಿದ್ದರು.